ಸುಂಟಿಕೊಪ್ಪ, ಆ. 23: ಕುಶಾಲನಗರದಲ್ಲಿ ನಡೆದ ಅಟೋ ಚಾಲಕ ಪ್ರವೀಣ್ ಪೂಜಾರಿ ಹತ್ಯೆಗೆ ಸಂಬಂದಿಸಿದಂತೆ ನೈಜ ಆರೋಪಿಗ ಳನ್ನು ಕೂಡಲೇ ಬಂಧಿಸುವಂತೆ ಸುಂಟಿಕೊಪ್ಪ ಬಿಜೆಪಿ ಸ್ಥಾನೀಯ ಸಮಿತಿ ಒತ್ತಾಯಿಸಿದೆ.

ಕುಶಾಲನಗರ ಹತ್ಯೆ ಸೇರಿದಂತೆ ಕೊಡಗಿನಲ್ಲಿ ನಡೆಯುತ್ತಿರುವ ಕೆಲವು ಘಟನೆಗಳು ಜನರಲ್ಲಿ ಆತಂಕವನ್ನು ಸೃಷ್ಟಿ ಮಾಡಿವೆ. ಇಂತಹ ಘಟನೆಗಳಿಗೆ ಕಾರಣವಾಗಿರುವ ಆರೋಪಿಗಳನ್ನು ಪೊಲೀಸ್ ಇಲಾಖೆ ಕೂಡಲೇ ಬಂಧಿಸಿ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಪ್ರವೀಣ್ ಪೂಜಾರಿ ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನು ಬಂಧಿಸದೇ ಇರುವದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ವೈಫಲ್ಯವಾಗಿದೆ ಎಂದು ದೂರಿದರು. ಆದಷ್ಟು ಬೇಗನೆ ಆರೋಪಿ ಗಳನ್ನು ಬಂಧಿಸಬೇಕು ಇಲ್ಲದಿದ್ದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಇಲ್ಲಿನ ಬಿಜೆಪಿ ನಗರಾಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ.

ಈ ಸಂದರ್ಭ ನಗರ ಬಿಜೆಪಿ ಕಾರ್ಯದರ್ಶಿ ಬಿ.ಕೆ. ಪ್ರಶಾಂತ್, ಮಾಜಿ ನಗರಾಧ್ಯಕ್ಷ ಬಿ.ಕೆ. ಮೋಹನ್, ಬಿಜೆಪಿಯ ಜಿ. ರಾಜನ್ ಮತ್ತಿತರರು ಇದ್ದರು.