ಮಡಿಕೇರಿ, ನ. 18: ಐಗೂರು ಮಸೀದಿಯಲ್ಲಿ ಪವಿತ್ರ ಕುರಾನ್‍ಗೆ ಬೆಂಕಿ ಹಚ್ಚಿದ ಘಟನೆಯನ್ನು ಖಂಡಿಸಿರುವ ಸೌತ್ ಕರ್ನಾಟಕ ಸಲಫಿ ಮೂಮೆಂಟ್ ಮಡಿಕೇರಿ ಘಟಕ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.ಕೊಡಗು ಜಿಲ್ಲೆ ಶಾಂತಿಯುತವಾದ ಜಿಲ್ಲೆ. ಇಲ್ಲಿ ಎಲ್ಲರೂ ಶಾಂತಿ-ಸಹಭಾಳ್ವೆಯಿಂದ ಬಾಳುತ್ತಿದ್ದಾರೆ. ಆದರೆ ಯಾರೋ ಕಿಡಿಗೇಡಿಗಳು ಕೋಮು ಭಾವನೆಗೆ ಧಕ್ಕೆ ಬರುವಂತೆ ವರ್ತಿಸುತ್ತಿದ್ದಾರೆ ಎಂದು ಸಂಘಟನೆ ಹೇಳಿದೆ.
ಪೊಲೀಸ್ ಇಲಾಖೆಯವರು ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚದಿದ್ದಲ್ಲಿ ಹೋರಾಟ ನಡೆಸಬೇಕಾಗುತ್ತದೆ. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ತಪ್ಪು ಮಾಡಿದವರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಳ್ಳುವದರ ಮೂಲಕ ಜಿಲ್ಲೆಯ ಜನರು ಶಾಂತಿಯುತವಾಗಿ ಬದುಕಲು ಅವಕಾಶ ಮಾಡಿಕೊಡಬೇಕಾಗಿ ಸಂಘಟನೆಯ ಅಧ್ಯಕ್ಷ ಕೆ.ಎಂ. ಹಾಶಿಂ ಹಾಗೂ ಉಪಾಧ್ಯಕ್ಷ ಇಬ್ರಾಹಿಂ ಕೋರಿದ್ದಾರೆ.