ಮಡಿಕೇರಿ, ಡಿ. 6: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಅಕಾಡೆಮಿಗಳು ಮತ್ತು ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ತಾ. 7 ರಂದು (ಇಂದು) 8 ರಂದು ಸಂಗಮ ಸಂಭ್ರಮ-2016 “ಸಾಂಸ್ಕøತಿಕ ಸಾಮರಸ್ಯ” ಕಾರ್ಯಕ್ರಮ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ತಾ. 7 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಗಾಂದಿ üಮೈದಾನದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನವರೆಗೆ ಸಾಂಸ್ಕøತಿಕ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಚಾಲನೆ ನೀಡಲಿದ್ದಾರೆ. ಮೆರವಣಿಗೆಯಲ್ಲಿ ಎಲ್ಲಾ ಅಕಾಡೆಮಿಗಳ ಜಾನಪದ ಕಲಾತಂಡಗಳು ಪಾಲ್ಗೊಳ್ಳಲಿವೆ. 11.30 ಗಂಟೆಗೆ ಸಂಗಮ ಸಂಭ್ರಮ “ಸಾಂಸ್ಕøತಿಕ ಸಾಮರಸ್ಯ” ಕಾರ್ಯಕ್ರಮವನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಉಮಾಶ್ರೀ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಮಡಿಕೇರಿ ಶಾಸಕ ಮಂಡೇಪಂಡ ಅಪ್ಪಚ್ಚು ರಂಜನ್ ಅವರು ವಹಿಸಲಿದ್ದು, ಚಿತ್ರಕಲಾ ಮತ್ತು ಶಿಲ್ಪಕಲಾ ಪ್ರದರ್ಶನದ ಉದ್ಘಾಟನೆಯನ್ನು ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸೀತಾರಾಂ, ಪುಸ್ತಕ ಪ್ರದರ್ಶನ ಮಳಿಗೆಗಳ ಉದ್ಘಾಟನೆಯನ್ನು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ, ಕರ್ನಾಟಕ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮನಾಥ ರೈ, ಕೊಡವ ಮತ್ತು ಅರೆಭಾಷಿಕ ಸಾಂಸ್ಕøತಿಕ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿಯ ಅಧ್ಯಕ್ಷ ಬಿ.ಎ. ಹರೀಶ್ ಇವರುಗಳು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು, ಕೊಡಗು ಕ್ಷೇತ್ರದ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಮಾಜಿ ಉನ್ನತ ಶಿಕ್ಷಣ ಸಚಿವರು ಹಾಗೂ ದೇವರಾಜ ಅರಸು ಪ್ರಶಸ್ತಿ ಪುರಸ್ಕøತರಾದ ಬಿ.ಎ. ಮೊಹಿದಿನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಾರುಲತ ಸೋಮಲ್ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2.30 ರಿಂದ ವಿವಿಧ ಅಕಾಡೆಮಿಗಳ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ 2.30 ರಿಂದ 3.30ರ ವರೆಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, 3.30 ರಿಂದ 4.30 ರವರೆಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, 4.30 ರಿಂದ 5.30 ರವರೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, 5.30 ರಿಂದ 6.15ರ ವರೆಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, 6.15 ರಿಂದ 6.45ರ ವರೆಗೆ ರಾಷ್ಟ್ರೀಯ ಸಂತ ಕವಿ ಕನಕದಾಸ ಮತ್ತು ಸಂಶೋಧನಾ ಕೇಂದ್ರ, 6.45 ರಿಂದ 8 ಗಂಟೆಯವರೆಗೆ ಕರ್ನಾಟಕ ನಾಟಕ ಅಕಾಡೆಮಿಯಿಂದ “ಪಂಪ ಭಾರತ” ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.

ಪೂರ್ವ ಸಿದ್ಧತಾ ಸಭೆ

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಇಂದು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್ ಅವರುಗಳ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು.

ಕಾರ್ಯಕ್ರಮದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ನಂತರ ಫೀ.ಮಾ. ಕಾರ್ಯಪ್ಪ ಕಾಲೇಜು ಮೈದಾನಕ್ಕೆ ತೆರಳಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ಮಾಡಲಾಯಿತು. ಈ ಸಂದರ್ಭ ಉಭಯ ಅಕಾಡೆಮಿಗಳ ಸದಸ್ಯರುಗಳಾದ ಮಂದ್ರಿರ ಮೋಹನ್ ದಾಸ್, ಮದುವೆಗದ್ದೆ ಬೋಜಪ್ಪಗೌಡ, ಬಾಕಿಲನ ವಸಂತ, ಅಣ್ಣೋಜಿಗೌಡ, ಡಾ. ಸುಭಾಶ್ ನಾಣಯ್ಯ, ಅಯ್ಯಪ್ಪ, ಮುಲ್ಲೇಂಗಡ ಬೇಬಿ ಚೋಂದಮ್ಮ, ಮಾದೇಟಿರ ಬೆಳ್ಯಪ್ಪ, ರಿಜಿಸ್ಟಾರ್ ಉಮರಬ್ಬ ಇದ್ದರು.