ಮಡಿಕೇರಿ, ಜೂ. 16: ಅಂಚೆ ಅದಾಲತ್ ಮುಂದಿನ ಸಭೆಯನ್ನು ತಾ. 17 ರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಅಂಚೆ ವಿಭಾಗದ ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ ಎಂದು ಕೊಡಗು ವಿಭಾಗ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.