ಮಡಿಕೇರಿ, ಸೆ. 24: ಹಿಂದೂ ಮಲೆಯಾಳಿ ಸಂಘದ ವತಿಯಿಂದ ಸೆ.25 ರಂದು ಓಣಂ ಹಬ್ಬದ ಪ್ರಯುಕ್ತ ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆಯೆಂದು ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್ ತಿಳಿಸಿದ್ದಾರೆ.
ಬೆಳಗ್ಗೆ ನಗರದ ಚೌಡೇಶ್ವರಿ ದೇವಲಾಯದಿಂದ ಮಲೆಯಾಳಿ ಸಾಂಪ್ರದಾಯಿಕ ಉಡುಪಿನಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದೆ. ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮೆರವಣಿಗೆಗೆ ಚಾಲನೆ ದೊರೆಯಲಿದ್ದು, ಮೆರವಣಿಗೆಯಲ್ಲಿ ಚಂಡೆ ವಾದ್ಯ, ಮಾವೇಲಿ ವೇಷಧಾರಿಗಳು ಹಾಗೂ ರಥ ಗಮನ ಸೆಳೆÉಯಲಿದೆ ಎಂದರು. 10 ವರ್ಷದೊಳಗಿನ ಬಾಲಕ, ಬಾಲಕಿಯರು ಸಾಂಪ್ರದಾಯಿಕ ಉಡುಪಿನಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡರೆ ಮತ್ತು ಮಾವೇಲಿ ವೇಷ ಧರಿಸಿದವರಿಗೆ ವಿಶೇಷ ಬಹುಮಾನ ನೀಡಲಾಗುವದು. 2015-16 ನೇ ಸಾಲಿನಲ್ಲಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವದು.
ಓಣಂ ಆಚರಣೆಯ ಪ್ರಯುಕ್ತ ಬೆಳಗ್ಗೆ 7 ರಿಂದ 10 ಗಂಟೆಯವರೆಗೆ ಪೂಕಳಂ ಸ್ಪರ್ಧೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂಎಲ್ಸಿಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಚೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪಿ.ಎಸ್. ಸುರೇಶ್, ಆದಾಯ ತೆರಿಗೆ ಅಧಿಕಾರಿ ಆರ್.ಎಸ್. ನಾಯಕ್, ನಗರಸಭಾ ಉಪಾಧ್ಯಕ್ಷರಾದ ಟಿ.ಎಸ್. ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆಯೆಂದು ಕೆ.ಎಸ್. ರಮೇಶ್ ತಿಳಿಸಿದ್ದಾರೆ.