ಮಡಿಕೇರಿ, ಜು. 29: ಕೊಡಗು ಪ್ರೆಸ್‍ಕ್ಲಬ್ ವತಿಯಿಂದ ಮೊಣ್ಣಂಡ ಶೋಭಾ ಸುಬ್ಬಯ್ಯ ಅವರ ಮನದಾಳದಿಂದ” ಎಂಬ ಕವನ ಸಂಕಲನದ ಬಿಡುಗಡೆ ಸಮಾರಂಭ ತಾ. 30ರಂದು (ಇಂದು) ಸಂಜೆ 4 ಗಂಟೆಗೆ ಕೊಡಗು ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್‍ಕ್ಲಬ್‍ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಸಮಾರಂಭದ ಉಧ್ಘಾಟನೆಯನ್ನು ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ನೆರವೇರಿಸಲಿದ್ದಾರೆ. “ಮನದಾಳದಿಂದ” ಕವನ ಸಂಕಲನದ ಬಿಡುಗಡೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲೇಖಕಿಯಾದ ರಾಜಲಕ್ಷ್ಮಿ ಗೋಪಾಲಕೃಷ್ಣ ಇವರು ಭಾಗವಹಿಸಲಿದ್ದಾರೆ.