ಮಡಿಕೇರಿ, ಜು. 8: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಾ. 9 ರಂದು (ಇಂದು) ಬೆಳಿಗ್ಗೆ 11.30 ಗಂಟೆಗೆ ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕಿರಿಯರ ವಿಭಾಗದ ಕ್ರೀಡಾ ನಿಲಯದ ಉದ್ಘಾಟನೆ ಸಮಾರಂಭ ನಡೆಯಲಿದೆ.

ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೊಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಶ್ರೀಮತಿ ಬಂಗೇರ ಹಾಗೂ ವಿಶೇಷ ಆಹ್ವಾನಿತರಾಗಿ ಅಂತರರಾಷ್ಟ್ರೀಯ ಹಾಕಿಪಟು ಅರ್ಜುನ್ ಹಾಲಪ್ಪ, ವಿಶ್ವಕಪ್ ಹಾಕಿ ವಿಜೇತ ತಂಡದ ಪ್ರತಿನಿಧಿ ಪಿ.ಇ. ಕಾಳಯ್ಯ ಮತ್ತಿತರರು ಭಾಗವಹಿಸಲಿದ್ದಾರೆ.