ಮಡಿಕೇರಿ, ಸೆ. 13: ಪ್ರಸಕ್ತ(2016-17ನೇ) ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವು ತಾ. 14 ರಂದು (ಇಂದು) ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ನಡೆಯಲಿದೆ. ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳು ತಾ. 14 ರಂದು 9.30ರೊಳಗೆ ಭಾಗವಹಿಸಲು ತಿಳಿಸಿದೆ. ಈ ಬಗ್ಗೆ ಮುಖ್ಯಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.