ಮಡಿಕೇರಿ, ಜ. 16: ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸುವರ್ಣ ಸಂಭ್ರಮದಲ್ಲಿದ್ದು, ತಾ. 17 ರಂದು (ಇಂದು) ಸುವರ್ಣ ಮಹೋತ್ಸವದ ಸಮಾರಂಭ ನಡೆಯಲಿದೆ.ನಗರದ ಕಾವೇರಿ ಹಾಲ್ನಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಉದ್ಘಾಟಿಸಲಿದ್ದಾರೆ. ಕೇಂದ್ರÀ್ರ ಸಚಿವ ಡಿ.ವಿ. ಸದಾನಂದ ಗೌಡ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಸುವರ್ಣ ಸಂಭ್ರಮ ಆಚರಣಾ ಸಮಿತಿಯ ಅಧ್ಯಕ್ಷ ಕೆ.ಬಿ. ಗಿರೀಶ್ ಗಣಪತಿ ಹಾಗೂ ಎಫ್ಕೆಸಿಸಿಐ ಅಧ್ಯಕ್ಷ ಎಂ.ಸಿ. ದಿನೇಶ್, ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ,ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷ ಟಿ.ಪಿ. ರಮೇಶ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ ಹಾಗೂ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಉಪಸ್ಥಿತರಿರುವರು.
ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಾಜಿ ಅಧ್ಯಕ್ಷರುಗಳಾದ ಎನ್.ಆರ್. ಹುಸೇನ್, ಎಂ.ಪಿ. ಹಾರೂನ್, ಎಂ.ಬಿ. ದೇವಯ್ಯ, ಜಿ. ರಾಜೇಂದ್ರ ಕೆ.ಬಿ. ಗಿರೀಶ್ ಗಣಪತಿ ಹಾಗೂ ಜಿ. ಚಿದ್ವಿಲಾಸ್, ಸಂಸ್ಥೆಯ ಕಾನೂನು ಸಲಹೆಗಾರರಾಗಿದ್ದ ಶಾಸಕ ಕೆ.ಜಿ. ಬೋಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿದ್ದ ಟಿ.ಪಿ. ರಮೇಶ್, ಕಾರ್ಯಕಾರಿ ಸಮಿತಿ ನಿರ್ದೇಶಕರಾಗಿದ್ದ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಸೇರಿದಂತೆ ಸಂಸ್ಥೆಯ ಎಲ್ಲಾ 24 ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುತ್ತದೆ. ಮಧ್ಯಾಹ್ನ 2 ಗಂಟೆಗೆ ವರ್ತಕರಿಗೆ ಜಿಎಸ್ಟಿ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಲಿದೆ. ತೆರಿಗೆ ಇಲಾಖೆ ಆಯುಕ್ತ ಗಿರಿಯಣ್ಣ, ಅಧಿಕಾರಿ ಕುಮಾರ್ ಮಾಹಿತಿ ನೀಡಲಿದ್ದಾರೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಫ್ಕೆಸಿಸಿಐ ಹಿರಿಯ ಉಪಾಧ್ಯಕ್ಷ ಕೆ. ರವಿ ಹಾಗೂ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಅವರ ಗೌರವ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ಕೆಎಸ್ಐಐಡಿಬಿ ಅಧ್ಯಕ್ಷ ಸಿ.ಎಂ. ಧನಂಜಯ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ಜಿಲ್ಲಾ ಕೈಗಾರಿಕಾ ಕೇಂದ್ರÀ್ರದ ಜಂಟಿ ನಿರ್ದೇಶಕ ಹೆಚ್. ರಾಮಕೃಷ್ಣೇಗೌಡ ಪಾಲ್ಗೊಳ್ಳಲಿದ್ದಾರೆ.
ಗೌರವ ಅತಿಥಿಗಳಾಗಿ ಮಾಜಿ ಸಂಸದ ಹೆಚ್.ವಿಶ್ವನಾಥ್, ಮಾಜಿ ಸಚಿವರುಗಳಾದ ಯಂ.ಸಿ. ನಾಣಯ್ಯ, ಬಿ.ಎ. ಜೀವಿಜಯ, ಸುಮಾ ವಸಂತ್, ಟಿ. ಜಾನ್, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಎ.ಕೆ. ಸುಬ್ಬಯ್ಯ, ಸಿ.ಎಸ್. ಅರುಣ್ ಮಾಚಯ್ಯ, ಎಸ್.ಜಿ. ಮೇದಪ್ಪ, ಕೆಜೆವಿವಿಎಸ್ ಸಂಘÀದ ಅಧ್ಯಕ್ಷರಾದ ಕೆ.ಎಂ. ಗಣೇಶ್, ಸಿಒಸಿ ಟ್ರಸ್ಟ್ ಅಧ್ಯಕ್ಷ ಬಿ.ಟಿ. ತಿಮ್ಮಶೆಟ್ಟಿ, ಕೆಡಿಸಿಸಿಐ ಪ್ರಧಾನ ಕಾರ್ಯದರ್ಶಿ ಮೋಂತಿ ಗಣೇಶ್, ಖಜಾಂಚಿ ಎ.ಎನ್. ರವಿ ಉತ್ತಪ್ಪ, ಉಪಾಧ್ಯಕ್ಷ ಎಂ.ಇ. ಹನೀಫ್, ಬಿ.ಆರ್. ನಾಗೇಂದ್ರ ಪ್ರಸಾದ್, ಸಂಘಟನಾ ಕಾರ್ಯದರ್ಶಿಗಳಾದ ಅಂಬೆಕಲ್ ನವೀನ್ ಕುಶಾಲಪ್ಪ, ಎಂ.ಪಿ. ಕೇಶವ ಕಾಮತ್ ಹಾಗೂ ಬಿ.ಆರ್. ಪ್ರಮೋದ್ ಉಪಸ್ಥಿತರಿರುವರು.