ಮಡಿಕೇರಿ, ಜೂ. 3: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವತಿಯಿಂದ ತಾ. 4 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆಯ ಕಾನ್ಫರೆನ್ಸ್ ಹಾಲ್‍ನಲ್ಲಿ ಮುಂದುವರಿಕಾ ವೈದ್ಯಕೀಯ ಶಿಕ್ಷಣ ಕುರಿತು ಕಾರ್ಯಾಗಾರ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್ಯದ 160 ವೈದ್ಯರುಗಳು ಭಾಗವಹಿಸಲಿದ್ದಾರೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕಿ ವೈ.ಮಮತಾ ತಿಳಿಸಿದ್ದಾರೆ.