ಸೋಮವಾರಪೇಟೆ, ನ. 13: ರಾಜ್ಯ ಸಹಕಾರ ಮಹಾ ಮಂಡಳಿ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಕೇಂದ್ರ ಬ್ಯಾಂಕ್, ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ತಾಲೂಕಿನ ವಿವಿಧ ಸಹಕಾರ ಸಂಘಗಳ ಆಶ್ರಯದಲ್ಲಿ ತಾ. 14 ರಂದು (ಇಂದು) 10.30ಗಂಟೆಗೆ ಇಲ್ಲಿನ ಮಹಿಳಾ ಸಮಾಜದಲ್ಲಿ 63ನೇ ಅಖಿಲ ಭಾರತ ಸಹಕಾರ ಸಪ್ತಾಹ ಮತ್ತು ಶಿಕ್ಷಣ-ತರಬೇತಿಯ ಮೂಲಕ ಸಹಕಾರ ಸಂಘಗಳ ಬಲವರ್ಧನೆ ದಿನವನ್ನು ಆಚರಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.ಕಾರ್ಯಕ್ರಮವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಹಿರಿಯ ಸಹಕಾರಿಗಳನ್ನು ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಮನುಮುತ್ತಪ್ಪ ಸನ್ಮಾನಿಸಲಿದ್ದಾರೆ. ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್ ಧ್ವಜಾರೋಹಣ ನೆರವೇರಿಸಲಿದ್ದು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಕೆ. ಮಾದಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸಹಕಾರ ಯೂನಿಯನ್ ಉಪಾಧ್ಯಕ್ಷ ಎಸ್.ಪಿ. ನಿಂಗಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದು, ಕರ್ನಾಟಕ ಇನ್ಸ್‍ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲೆ ಆರ್.ಎಸ್. ರೇಣುಕ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ 9 ಮಂದಿ ಹಿರಿಯ ಸಹಕಾರಿಗಳನ್ನು ಸನ್ಮಾನಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.