ಮಡಿಕೇರಿ, ಆ. 14: ಜಿಲ್ಲಾಡಳಿತ ವತಿಯಿಂದ ತಾ. 15 ರಂದು ನಗರದ ಕೋಟೆ ಆವರಣದಲ್ಲಿ 70ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಯಲಿದೆ. ತಾ. 15ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರ ಮೂರ್ತಿ, ಶಾಸಕ ಕೆ.ಜಿ. ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್‍ನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಶ್ರೀಮತಿ ಬಂಗೇರ ಮತ್ತಿತರರು ಭಾಗವಹಿಸ ಲಿದ್ದಾರೆ. ಸಂಜೆ 4.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ - ಸಂಸ್ಥೆಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ನಗರಸಭೆ ಅಧ್ಯಕ್ಷರು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.