ಮಡಿಕೇರಿ, ಜೂ. 9: ಭಾರತ್ ಆಸ್ಪತ್ರೆ ಮತ್ತು ಗಂಥಿ ಸಂಸ್ಥೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಹಯೋಗದೊಂದಿಗೆ ವಿಶೇಷವಾಗಿ ಬಿ.ಪಿ.ಎಲ್. ಕಾರ್ಡುದಾರರಿಗೆ ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರಿಂದ ತಾ. 10 ರಂದು (ಇಂದು) ಬೆಳಿಗ್ಗೆ 10 ಗಂಟೆಯಿಂದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ವೀರಾಜಪೇಟೆ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸಲಾಗುವದು. ಚಿಕಿತ್ಸೆಯ ಖರ್ಚು ವೆಚ್ಚಗಳನ್ನು ಸರ್ಕಾರ ಭರಿಸುತ್ತದೆ. ತಾಲೂಕಿನ ಸುತ್ತಮುತ್ತಲಿನ ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆಯಬೇಕೆಂದು ಕೋರಲಾಗಿದೆ.