ಕುಶಾಲನಗರ, ಜು. 22: ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ತರಗತಿ ಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆಯಿತು. ಕಾಲೇಜು ಆರಂಭಗೊಂಡು ಎರಡು ತಿಂಗಳು ಕಳೆದರೂ ರಸಾಯನಶಾಸ್ತ್ರ ವಿಭಾಗದ ತರಗತಿಗಳಿಗೆ ಉಪನ್ಯಾಸಕರ ಕೊರತೆ ಇದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕೂಡಲೇ ಉಪನ್ಯಾಸಕರನ್ನು ನೇಮಕ ಗೊಳಿಸಬೇಕು. ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಸಮಸ್ಯೆಗೆ ಪರಿಹಾರ ಸೂಚಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಎಬಿವಿಪಿ ನೇತೃತ್ವದಲ್ಲಿ 300 ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಲೇಜು ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆಸಿ ಉಪನ್ಯಾಸಕರನ್ನು ನೇಮಕ ಗೊಳಿಸಬೇಕೆಂಬ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಸುದ್ದಿಗಾರ ರೊಂದಿಗೆ ಮಾತನಾಡಿದ ಎಬಿವಿಪಿ ಮುಖಂಡ ಲಕ್ಷ್ಮಿನಾರಾಯಣ, ಸರಕಾರಿ ಪದವಿಪೂರ್ವ ಕಾಲೇಜಿನ ರಾಸಾಯನಶಾಸ್ತ್ರ ವಿಭಾಗಕ್ಕೆ ಉಪನ್ಯಾಸ ಕರಿಲ್ಲದ ಕಾರಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಪದವಿಪೂರ್ವ ಶಿಕ್ಷಣ ಇಲಾಖೆ ಗಮನಕ್ಕೆ ತಂದರೂ ಸಹ ಸೂಕ್ತ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಸ್ಪಂದಿಸಿದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸ್ವಾಮಿ ಸಂಬಂಧಪಟ್ಟ ವಿಭಾಗಕ್ಕೆ ಉಪನ್ಯಾಸಕರನ್ನು ನೇಮಿಸಿ ಆದೇಶ ಹೊರಡಿಸಿದ ಹಿನೆÀ್ನಲೆಯಲ್ಲಿ ಪ್ರತಿಭಟನೆಯನ್ನು ಹಿಂತೆಗೆದು ಕೊಳ್ಳಲಾಯಿತು. ಈ ಸಂದರ್ಭ ಎಬಿವಿಪಿ ಜಿಲ್ಲಾ ಸಂಚಾಲಕ ನವನೀತ್, ಹರೀಶ್, ರವಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.