ಮಡಿಕೇರಿ, ಡಿ. 5: ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ತಾ. 6 ಮತ್ತು 7 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ಆಗಮಿಸಿ ಸೋಮವಾರಪೇಟೆ ತಾಲೂಕಿನ ವಿವಿಧ ಗ್ರಾ.ಪಂ.ಯ ವ್ಯಾಪ್ತಿಯಲ್ಲಿ ಸಮುದಾಯ ಭವನ, ರಸ್ತೆ ಹಾಗೂ ಇತರ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಗುಮ್ಮನಕೊಲ್ಲಿಯ ಅಲ್ಪಸಂಖ್ಯಾತ ವಿದ್ಯಾರ್ಥಿ ವಸತಿ ನಿಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ತಾ. 7 ರಂದು ಎಫ್.ಎಂ.ಸಿ. ಕಾಲೇಜು ಮೈದಾನದಲ್ಲಿ ನಡೆಯುವ ಸಂಗಮ ಸಂಭ್ರಮ ಸಾಂಸ್ಕøತಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯುವ ಕೆ.ಡಿ.ಪಿ. ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯುವ ಜನಮನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಆ್ಯಂಟನಿ ಮೆಂಡೋನ್ಸಾ ತಿಳಿಸಿದ್ದಾರೆ.