ಮಡಿಕೇರಿ, ಆ. 19: ಕರ್ನಾಟಕ ರಾಜ್ಯ ವಿಧಾನ ಪರಿಷತ್‍ನ ಸದಸ್ಯ ಎಂ.ಪಿ ಸುನಿಲ್ ಸುಬ್ರಮಣಿ ಅವರನ್ನು ವೀರಾಜಪೇಟೆ ತಾಲೂಕಿನ ಅಮ್ಮತ್ತಿ-ಕಾವಾಡಿ ಗ್ರಾಮದ ಶ್ರೀ ಭಗವತಿ ದೇವಾಲಯ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸುನಿಲ್ ಸುಬ್ರಮಣಿ ಅವರು, ಈ ಭಾಗದ ಸಮಸ್ಯೆಗಳಿಗೆ ಹೆಚ್ಚಿನ ಒತ್ತು ನೀಡಲಾಗುವದು. ಈಗಾಗಲೇ ಕ್ಷೇತ್ರಾಭಿವೃದ್ಧಿ ನಿಧಿಯಿಂದ ರೂ. 2 ಲಕ್ಷ ಅನುದಾನವನ್ನು ಶ್ರೀ ಭಗವತಿ ದೇವಾಲಯದ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅನುದಾನ ನೀಡÀಲಾಗುವದು ಎಂದರು. ಕರ್ನಾಟಕ ರಾಜ್ಯದಲ್ಲಿ ಹಲವಾರು ದೇವಾಲಯಗಳು ದುಸ್ಥಿತಿಯಲ್ಲಿದ್ದು, ಜಿಲ್ಲೆಯ ದೇವಾಲಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕಾಗಿ ಸಂಬಂಧಪಟ್ಟ ಸಚಿವರನ್ನು ಕೋರುವದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ದೇವಾಲಯದ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಮಂಗಳೂರು ವಿಭಾಗದಿಂದ ಆಯೋಜಿಸಿದ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕÀ ಸುನೀತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘಚಾಲಕ ಕುಟ್ಟಂಡ ಪ್ರಿನ್ಸ್ ಗಣಪತಿ ಕಾರ್ಯಕ್ರಮ ನಡೆಸಿಕೊಟ್ಟರು.

ಶ್ರೀ ಭಗವತಿ ದೇವಾಲಯದ ಅಧ್ಯಕ್ಷ ಗಣಪತಿ, ಕಾರ್ಯದರ್ಶಿ ಕುಟ್ಟಂಡ ಪ್ರಿನ್ಸ್ ಗಣಪತಿ, ಖಜಾಂಚಿ ನೆಲ್ಲಮಕ್ಕಡ ಸುರೇಶ್, ಸಮಿತಿ ಸದಸ್ಯರಾದ ಜಗದಿಶ್, ವಸಂತ್, ಗ್ರಾಮ ಪಂಚಾಯತ್ ಸದಸ್ಯ ಕಾವಾಡಿಚಂಡ ಸುರೇಶ್, ಆರ್.ಎಸ್.ಎಸ್ ಪ್ರಚಾರಕ ಸುನೀತ್, ಸ್ಥಳೀಯರಾದ ಸುವಿನ್ ಗಣಪತಿ ಹಾಗೂ ಕಾವಾಡಿ ಗ್ರಾಮದ ಸ್ಥಳಿಯರು ಉಪಸ್ಥಿತರಿದ್ದರು.