ಸೋಮವಾರಪೇಟೆ, ನ. 26: ಇಲ್ಲಿನ ಎಸ್.ಜೆ.ಎಂ. ಬಾಲಿಕಾ ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಎಲಿಜಬೆತ್ ಲೋಬೋ ಅವರು “ಶಿಕ್ಷಣ ರತ್ನ” ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಷ್ಟ್ರೀಯ ರಾಜಕೀಯ ಶಿಕ್ಷಣ ತರಬೇತಿ ಸಂಸ್ಥೆ ಮತ್ತು ಬೆಂಗಳೂರಿನ ಕರ್ನಾಟಕ ಅಕಾಡೆಮಿ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲಿಜಬೆತ್ ಲೋಬೋ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈಗಾಗಲೇ ಹಲವು ರಾಜ್ಯ ಪ್ರಶಸ್ತಿಗಳನ್ನು ಪಡೆದಿರುವ ಇವರಿಗೆ ಶಿಕ್ಷಣ ಕ್ಷೇತ್ರದಲ್ಲಿನ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ಮತ್ತು ಪ್ರಮಾಣ ಪತ್ರ ನೀಡಲಾಗಿದೆ. ಈ ಸಂದರ್ಭ ರಾಜ್ಯ ಸಭೆಯ ಮಾಜಿ ಸದಸ್ಯ ಡಾ. ಎಂ.ವಿ. ರಾಜಶೇಖರನ್, ಕರ್ನಾಟಕ ಸಾಂಸ್ಕøತಿಕ ಅಕಾಡೆಮಿಯ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.