ಸೋಮವಾರಪೇಟೆ, ಅ. 2: ಐಗೂರು ಕೃಷಿ ಪತ್ತಿನ ಸಹಕಾರ ಸಂಘ 2015-16ನೇ ಸಾಲಿನಲ್ಲಿ 29.51ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಂ.ಎಂ. ಬೋಪಯ್ಯ ಹೇಳಿದರು.

ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘದ ಸದಸ್ಯರಿಗೆ ಶೇ. 12 ರ ಡಿವಿಡೆಂಡ್ ನೀಡಲಾಗುವದು. ಸಂಘದಿಂದ ಸದಸ್ಯರಿಗೆ 16.43 ಕೋಟಿ ರೂ. ಸಾಲ ನೀಡಲಾಗಿದ್ದು, 549.57 ಲಕ್ಷ ರೂ. ಠೇವಣಿ ಸಂಗ್ರಹಿಸಲಾಗಿದೆ ಎಂದರು.

ನಿಗದಿತ ಸಮಯದಲ್ಲಿ ಸಾಲ ಮರುಪಾವತಿ ಮಾಡಿದ ಸದಸ್ಯರಿಗೆ ಹಾಗೂ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸ ಲಾಯಿತು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿಕ್ಕಿರಾಜು, ನಿರ್ದೇಶಕರುಗಳು ಉಪಸ್ಥಿತರಿದ್ದರು.