ಸೋಮವಾರಪೇಟೆ, ಸೆ. 27: ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ತಾಲೂಕು ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಮಹಾ ಸಭೆಯಲ್ಲಿ ಸಮಾಜದಿಂದ ಆಯ್ಕೆಯಾದ ಜನಪ್ರತಿನಿಧಿಗಳು ಹಾಗೂ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಒಲಂಪಿಯನ್, ಅಂತರಾಷ್ಟ್ರೀಯ ಹಾಕಿ ಆಟಗಾರ ರಘುನಾಥ್ ಅವರ ಅನುಪಸ್ಥಿತಿಯಲ್ಲಿ ಅವರ ಪೋಷಕರಾದ ರಾಮಚಂದ್ರ ಮತ್ತು ಬೋಜಮ್ಮ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯರುಗಳಾದ ಕೆ.ಪಿ. ಚಂದ್ರಕಲಾ, ಪೂರ್ಣಿಮಾ ಗೋಪಾಲ್, ಬಿ.ಜೆ. ದೀಪಕ್ ಅವರುಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ. ಚಂಗಪ್ಪ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಸಮಾಜದ ಮುಖಂಡರುಗಳಾದ ಬಿ.ಎ. ಜೀವಿಜಯ, ಕೆ.ಎಂ. ಲೋಕೇಶ್, ವಿ.ಪಿ. ಶಶಿಧರ್, ಮಡಿಕೇರಿ ತಾಲೂಕು ಅಧ್ಯಕ್ಷ ಕೃಷ್ಣರಾಜು, ವೀರಾಜಪೇಟೆ ಅಧ್ಯಕ್ಷ ದೇವಲಿಂಗಯ್ಯ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.