ಮೂರ್ನಾಡು, ಸೆ. 26 : ಮೂರ್ನಾಡು ಹಿಂದೂ ಮಲಯಾಳಿ ಸಂಘದ ವತಿಯಿಂದ 8ನೇ ವರ್ಷದ ಓಣಂ ಹಬ್ಬದ ಕಾರ್ಯಕ್ರಮ ಅ. 2ರಂದು ನಡೆಯಲಿದೆ. ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸ ಲಾಗಿರುವ ಕಾರ್ಯಕ್ರಮದಲ್ಲಿ ಬೆಳಗ್ಗೆ 8 ಗಂಟೆಯಿಂದ ಹೂವಿನ ರಂಗೋಲಿ ಸ್ಪರ್ಧೆ, 9.30 ಗಂಟೆಗೆ ಮಹಾಬಲಿ, ತೆಯ್ಯಂ ಹಾಗೂ ಸಿಂಗಾರಿ ಮೇಳದೊಂದಿಗೆ ಪಟ್ಟಣದ ಮುಖ್ಯ ಬೀದಿಯಲ್ಲಿ ಹಬ್ಬದ ಮೆರವಣಿಗೆ ನಡೆಯಲಿದೆ.
ಬಳಿಕ 11.30 ಗಂಟೆಗೆ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಗಳಾಗಿ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ತಾಲೂಕು ಪಂಚಾಯತ್ ಅಧ್ಯಕ್ಷೆ ಶೋಭಾ ಮೋಹನ್, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ, ಜಿಲ್ಲಾ ಪಂಚಾಯತಿ ಸದಸ್ಯೆ ಕಲಾವತಿ ಪೂವಪ್ಪ, ಶ್ರೀಜಾ ಶಾಜಿ, ಸುನಿತಾ ಮಂಜುನಾಥ್, ಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್, ಸುಂಟಿಕೊಪ್ಪ ಹಿಂದೂ ಮಲಯಾಳಿ ಸಂಘದ ಪಿ. ಪಿ. ಮೋಹನ್, ಸೋಮವಾರಪೇಟೆ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಪಿ.ಡಿ. ಪ್ರಕಾಶ್, ಚೆಟ್ಟಳ್ಳಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಶಶಿಕುಮಾರ್, ಮರಗೋಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಬಾಲಕೃಷ್ಣನ್ ಆಗಮಿಸಲಿ ದ್ದಾರೆ. ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ಅಧ್ಯಕ್ಷತೆಯನ್ನು ವಹಿಸಲಿ ದ್ದಾರೆ.
ಬಳಿಕ ಕೊಯಿಲಾಂಡಿ ಅರಂಙ ತಂಡದಿಂದ ನಾಟ್ಟುಣರ್‍ವ್ ಕಾರ್ಯಕ್ರಮ ನಡೆಯಲಿದೆ.