ಶನಿವಾರಸಂತೆ, ನ. 25: ಸಮೀಪದ ಕೊಡ್ಲಿಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ತಾ. 26ರಂದು (ಇಂದು) ಮಧ್ಯಾಹ್ನ 2 ಗಂಟೆಗೆ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಕಸಾಪ ಹೋಬಳಿ ಘಟಕದ ಅಧ್ಯಕ್ಷ ಎಂ.ಎಸ್. ಅಬ್ದುಲ್ ರಬ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಾಲ್ನೂರು ಘಟಕದ ಅಧ್ಯಕ್ಷ ಎಲ್.ಜೆ. ಜವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಲೇಖಕಿ ಹಾಗೂ ಪತ್ರಕರ್ತೆ ಶ.ಗ. ನಯನತಾರಾ ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾ ಘಟಕದ ನಿರ್ದೇಶಕ ನಂಜುಂಡಸ್ವಾಮಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಡಿ.ಪಿ. ಭೂಪಾಲ್ ಅವರು ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ ಶಾಲಾ - ಕಾಲೇಜು ವಿದ್ಯಾರ್ಥಿ ಗಳಿಂದ ಹಾಗೂ ಸಾರ್ವಜನಿಕರಿಂದ ಸಮೂಹ ನೃತ್ಯ ಹಾಗೂ ಕಿರು ನಾಟಕಗಳು ಪ್ರದರ್ಶನಗೊಳ್ಳುತ್ತವೆ ಎಂದು ಕಸಾಪ ಕೊಡ್ಲಿಪೇಟೆ ಹೋಬಳಿ ಘಟಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.