ವೀರಾಜಪೇಟೆ, ನ. 29 :ಗಡಿ ನಾಡಾದ ಕೊಡಗು ಜಿಲ್ಲೆಯಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವದು ನಮ್ಮ ಧ್ಯೇಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲೋಕೆಶ್ ಸಾಗರ್ ಹೇಳಿದರು. ತಾಲೂಕು ಮೈದಾನದಲ್ಲಿ ನಡೆದ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಅಂಗಡಿ ಮುಂಗಟ್ಟುಗಳ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಆದೇಶ ಇದ್ದರೂ ಕೂಡ ಇಂಗ್ಲಿಷ್ ಅನ್ನು ದಪ್ಪಕ್ಷರದಲ್ಲಿ ಬರೆದು ಕನ್ನಡವನ್ನು ಕಂಡೂ ಕಾಣದ ರೀತಿಯಲ್ಲಿ ಬಳಸಲಾಗುತ್ತಿದೆ. ಇಂvಹÀವರ ವಿರುದ್ಧ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವ ಅನಿವಾರ್ಯತೆ ಇದೆ ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಕ.ಸಾ.ಪ ತಾಲೂಕು ಅಧ್ಯಕ್ಷ ಮಧೂಶ್ ಪೂವಯ್ಯ ವಹಿಸಿದ್ದರು. ವೇದಿಕೆಯಲ್ಲಿ ಸಮ್ಮೇಳಾನಾಧ್ಯಕ್ಷೆ ಚಿಪ್ಪಿ ಕಾರ್ಯಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್,
(ಮೊದಲ ಪುಟದಿಂದ) ಉಪಾಧ್ಯಕ್ಷ ನೆಲ್ಲಿರ ಚಲನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಚಿನ್ ಕುಟ್ಟಯ್ಯ, ಉಪಾಧ್ಯಕ್ಷೆ ತಸ್ನಿಂ, ಜಿ.ಪಂ ಸದಸ್ಯ ಬಾನಂಡ ಪ್ರಥ್ಯು, ತಹಶೀಲ್ದಾರ್ ಮಹಾದೇವಸ್ವಾಮಿ, ಕಾರ್ಯನಿರ್ವಹಣಾಧಿಕಾರಿ ಕಿರಣ್ ಪಡ್ನೇಕರ್, ಬಿ.ಇ.ಒ ಪಾಂಡು, ಪಟ್ಣಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ನಂತರ ಕನ್ನಡಭಿಮಾನಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.