ಮಡಿಕೇರಿ, ಜು. 16: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆ ಇಂದು ನಗರದ ಕಮ್ಯುನಿಟಿ ಹಾಲ್ನಲ್ಲಿ ನಡೆಯಿತು.
ಸಭೆಯಲ್ಲಿ ಘಟಕದ ಮೈಸೂರು ವಿಭಾಗ ಅಧ್ಯಕ್ಷ ರಶೀದ್ ಅಹಮದ್ ಮಾತನಾಡಿ ಘಟಕವನ್ನು ಸಂಘಟನೆ ಮಾಡುವದರ ಮೂಲಕ ಇನ್ನಷ್ಟು ಜಾಗೃತಿಗೊಳಿಸಬೇಕಿದೆ. ಕಾರ್ಯಕರ್ತರಿಗೆ ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ. ರಾಜ್ಯದ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತರಿಗೆ, ಹಿಂದುಳಿದವರಿಗೆ ಹಾಗೂ ಪರಿಶಿಷ್ಟರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಇದೇ ಸಂದರ್ಭ ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಮೈಸೂರು ಘಟಕದ ಅಧ್ಯಕ್ಷ ನಿಸಾರ್ ಅಹಮದ್, ಕೆ.ಎಸ್.ಆರ್.ಟಿ.ಸಿ. ನಿಗಮದ ಅಧ್ಯಕ್ಷ ಶೌಕತ್ ಆಲಿ, ಕಾಂಗ್ರೆಸ್ನ ಮಾಜಿ ಜಿಲ್ಲಾಧ್ಯಕ್ಷ ಬಿ.ಟಿ. ಪ್ರದೀಪ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಕೆ.ಎಂ. ಲೋಕೇಶ್, ಮೂಡಾ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ವಕ್ಫ್ ಬೋರ್ಡ್ ಅಧ್ಯಕ್ಷ ರೆಹಮಾನ್ ಹಾಗೂ ಇನ್ನಿತರರು ಇದ್ದರು.