ವೀರಾಜಪೇಟೆ, ಡಿ. 1: ಚೆನ್ನಯ್ಯನಕೋಟೆ ವ್ಯಾಪ್ತಿಯ ಕೆರೆಬೈಲು ನಿವಾಸಿ ಜಿ.ಟಿ. ಮಣಿ ಎಂಬವರು ಆನೆ ತುಳಿತದಿಂದ ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅರಣ್ಯ ಇಲಾಖೆಗೆ ವಿಷಯ ಗೊತ್ತಿದ್ದರೂ ನಿರ್ಲಕ್ಷ್ಯ ತಾಳಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಹಾಗೂ ಕೊಡಗು ಮುಸ್ಲೀಂ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷ ಪಿ.ಎ. ಹನೀಫ್ ಆರೋಪಿಸಿದ್ದಾರೆ.
ವೀರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಇಂದು ವಿಚಾರಿಸಿದ ಸಂಕೇತ್ ಪೂವಯ್ಯ ಅವರು ಮಾತನಾಡಿ ಜಿ.ಟಿ ಮಣಿ ಎಂಬವರು ನ. 8 ರಂದು ಚೆನ್ನಯ್ಯನ ಕೋಟೆಯ ಕೆರೆಬೈಲು ತೋಟದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ಹಠಾತ್ ಧಾಳಿ ನಡೆಸಿದ ಪರಿಣಾಮ ಬಲಗೈ ಮತ್ತು ಎದೆಯ ಭಾಗಕ್ಕೆ ಮಾರಣಾಂತಿಕ ಹಲ್ಲೆಯಾಗಿದೆ. ಚೆನ್ನಯ್ಯನಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ವೀರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಭಾವಿ ಅಲ್ಲದ ಇವರನ್ನು ಅರಣ್ಯ ಇಲಾಖೆ ಸ್ಪಂದಿಸುತ್ತಿಲ್ಲ. ಕೂಡಲೆ ಅರಣ್ಯ ಇಲಾಖೆ ಸ್ಪಂದಿಸಿ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಇವರ ಕುಟುಂಬಕ್ಕೆ ಕಾನೂನು ಬದ್ದವಾಗಿ ಪರಿಹಾರ ನೀಡಬೇಕು. ಇಲ್ಲದಿದ್ದರೆ ಅರಣ್ಯ ಕಚೇರಿ ಎದುರು ಉಗ್ರ ರೀತಿಯ ಹೋರಾಟ ಹಮ್ಮಿಕೊಳ್ಳ ಲಾಗುವದು ಎಂದು ಎಚ್ಚರಿಸಿದ್ದಾರೆ.
ಸಂಕೇತ್ ಪೂವಯ್ಯ ಆಸ್ಪತ್ರೆಯ ಭೇಟಿ ನೀಡಿದ ಸಂದÀರ್ಭ ಮುಸ್ಲಿಂ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಏಝಾಜ್ ಅಹಮದ್, ಎಂ.ಎ. ಅಬೂಬಕ್ಕರ್ ಹಾಗೂ ಜೆಡಿಎಸ್ನ ಜಿಲ್ಲಾ ಮುಖಂಡ ಎಸ್.ಎಚ್. ಮತೀನ್ ಹಾಗೂ ಇತರ ಕಾರ್ಯಕರ್ತರು ಹಾಜರಿದ್ದರು.