ಮಡಿಕೇರಿ, ಜೂ. 11: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಅರ್ಹ ಕಾನೂನು ಪದವೀಧರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. 30 ಕೊನೆ ದಿನವಾಗಿದೆ.

ತರಬೇತಿ ಅವಧಿಯು 4 ವರ್ಷಗಳಾಗಿದ್ದು, ಮಾಸಿಕ ರೂ. 2 ಸಾವಿರಗಳ ಶಿಷ್ಯ ವೇತನವನ್ನು ನೀಡಲಾಗುವದು. ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯರ್ಥಿಗಳಿಗೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (4 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿಯನ್ನು ಪಡೆಯಲು ಸಂಪರ್ಕಿಸಬೇಕಾದ ವಿಳಾಸ ಇಂತಿದೆ: ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ- 08272-225531, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 08272-223552. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ 08276-281115, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ 08274-249476 ಸಂಪರ್ಕಿಸಬಹುದು.