ಮಡಿಕೇರಿ, ಜ. 3: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಕೊಡಗು ಹಾಗೂ ಕಾವೇರಿ ವಿದ್ಯಾಸಂಸ್ಥೆ ವೀರಾಜಪೇಟೆ ಸಂಯುಕ್ತಾಶ್ರಯದಲ್ಲಿ ಕಾವೇರಿ ನದಿ ನೀರಿನ ಬಳಕೆ ಮತ್ತು ಸಂರಕ್ಷಣೆ ಕುರಿತಾದ ಮಾಹಿತಿ ಮತ್ತು ಅರಿವು ಬಗ್ಗೆ ಉಪನ್ಯಾಸ ಕಾರ್ಯಕ್ರಮ ಈ ತಿಂಗಳ 5 ರಂದು ವೀರಾಜಪೇಟೆಯ ಕಾವೇರಿ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಉದ್ಘಾಟಿಸುವರು. ವೀರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಸಿ.ಎಂ. ನಾಚಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್‍ಕುಮಾರ್, ಕಾವೇರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಎ.ಸಿ. ಗಣಪತಿ, ವೀರಾಜಪೇಟೆ ಡಿವೈಎಸ್ಪಿ ನಾಗಪ್ಪ, ಮೈಸೂರು ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಕೆ.ಎಂ. ಲಿಂಗರಾಜು, ಪಟ್ಟಣ ಪಂಚಾಯಿತಿ ಅಧ್ಯಕ್ಷÀ ಸಚಿನ್ ಕುಟ್ಟಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್ ಮತ್ತು ಕೂರ್ಗ್ ಗ್ರೀನ್ ಸಿಟಿ ಫೋರಂ ಸಂಚಾಲಕ ಚೈಯಂಡ ಸತ್ಯ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕÀ ಎಂ.ಎನ್. ಚಂದ್ರಮೋಹನ್, ಕೊಡಗು ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್ ಪಾಲ್ಗೊಳ್ಳಲಿದ್ದಾರೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಜಿಲ್ಲಾ ಸಂಚಾಲಕಿÀ ರೀನಾ ಪ್ರಕಾಶ್ ತಿಳಿಸಿದ್ದಾರೆ.

ನದಿ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಲತಜ್ಞ ಎ.ಎಂ. ಸೂರಜ್ ಉಪನ್ಯಾಸ ಕಾರ್ಯಕ್ರಮ ನೀಡುವರು ಎಂದು ಅವರು ತಿಳಿಸಿದ್ದಾರೆ.