ಕುಶಾಲನಗರ, ಡಿ 14: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತಾಶ್ರಯದಲ್ಲಿ
“ಜೀವನದಿ ಕಾವೇರಿ ನೀರಿನ ಬಳಕೆ ಮತ್ತು ಪರಿಸರ ಸಂರಕ್ಷಣೆ” ಮಾಹಿತಿ ಮತ್ತು ಉಪನ್ಯಾಸ ಕಾರ್ಯಕ್ರಮ ತಾ. 15 ರಂದು (ಇಂದು) ಹಮ್ಮಿಕೊಳ್ಳಲಾಗಿದೆ.
ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಪ್ರಾಂಶುಪಾಲ ಹೆಚ್.ವಿ.ಶಿವಪ್ಪ, ಕಾಲೇಜು ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಚಾಲನೆ ನೀಡÀಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮ ಆಯೋಜಕರು ಹಾಗೂ ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಜೆ.ಜಿ. ಕಾವೇರಿಯಪ್ಪ, ಕೊಡಗು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ರಾಜೇಂದ್ರಪ್ರಸಾದ್, ಮೈಸೂರಿನ ಹಿರಿಯ ಪರಿಸರ ಅಧಿಕಾರಿ ಕೆ.ಎಂ.ಲಿಂಗರಾಜು, ಕೊಡಗು ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸದಸ್ಯರಾದ ಪಿ.ಎಂ. ಲತೀಫ್, ಕೆ.ಪಿ. ಚಂದ್ರಕಲಾ, ಕೆ.ಆರ್. ಮಂಜುಳಾ, ಸೋಮವಾರಪೇಟೆ ತಾಲೂಕು ಪಂಚಾಯಿತಿ ಸದಸ್ಯೆ ಆರ್. ಪುಷ್ಪಾ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಕೊಡಗು ಜಿಲಾ ್ಲಪಂಚಾಯತ್ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ವೀರಾಜಪೇಟೆ ಜಲ ತಜ್ಞ ಎ.ಎಂ. ಸೂರಜ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಕಾವೇರಿ ನದಿ ನೀರಿನ ಬಳಕೆ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದರು.
ಕಾಲೇಜಿನ ಎನ್ನೆಸ್ಸೆಸ್ ಯೋಜನೆಯ ಎರಡು ಘಟಕಗಳ ವಿದ್ಯಾರ್ಥಿಗಳು, ಸಂಘಸಂಸ್ಥೆಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಲಕ್ಷ್ಮಣ್ ಕಾವೇರಿ ನದಿ ತಟಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ನದಿ ಸ್ವಚ್ಛತಾ ಆಂದೋಲನದ ಪ್ರಮುಖರಾದ ಡಿ.ಆರ್. ಸೋಮಶೇಖರ್, ಕೆ.ಜಿ. ಮನು ಇದ್ದರು.