ಸೋಮವಾರಪೇಟೆ, ಡಿ. 7: ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ನಿರ್ಮಿಸಿರುವ ಕಾವೇರಿ ಮಾತೆ ಪ್ರತಿಮೆ ಲೋಕಾರ್ಪಣೆ, ಕಾರಂಜಿ ಉದ್ಘಾಟನೆ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ ತಾ. 8 ಮತ್ತು 9ರಂದು ನಡೆಯಲಿದೆ.

ವಾರ್ಷಿಕೋತ್ಸವ ಪ್ರಯುಕ್ತ ತಾ. 8 ರಂದು (ಇಂದು) ಬೆಳಿಗ್ಗೆ 9 ಗಂಟೆಗೆ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಕ್ರೀಡಾಕೂಟ ಆಯೋಜಿಸಲಾಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನಿರ್ದೇಶಕ ನಾಪಂಡ ಮುತ್ತಪ್ಪ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಮಾಜೀ ಸೈನಿಕ ಪಿ.ಪಿ. ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ ಭಾಗವಹಿಸಲಿದ್ದಾರೆ.

ತಾ. 9ರಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ಮಾತೆ ಪ್ರತಿಮೆ ಮತ್ತು ಕಾರಂಜಿ ಉದ್ಘಾಟನೆ ನಡೆಯಲಿದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಸುಗಮ ಸಂಗೀತ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಎಸ್‍ಡಿಎಂಸಿ ಅಧ್ಯಕ್ಷ ಸಿದ್ದಲಿಂಗಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದು, ಜನಪ್ರತಿನಿಧಿಗಳು, ಸರ್ಕಾರಿ ಇಲಾಖಾಧಿಕಾರಿಗಳು, ಪ್ರಮುಖರು ಭಾಗವಹಿಸಲಿದ್ದಾರೆ.