ಕುಶಾಲನಗರ, ಜ. 20: ಬನದ ಹುಣ್ಣಿಮೆ ಅಂಗವಾಗಿ ಕುಶಾಲನಗರದಲ್ಲಿ ಕಾವೇರಿ ನದಿಗೆ 61ನೇ ಮಹಾ ಆರತಿ ನಡೆಯಿತು. ಕುಶಾಲನಗರ ಮಾತೆ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕುಶಾಲನಗರದ ಅಯ್ಯಪ್ಪ ಸ್ವಾಮಿ ದೇವಾಲಯದ ನದಿ ತಟದಲ್ಲಿ ಅಯ್ಯಪ್ಪ ಸ್ವಾಮಿ ದೇವಾಲಯದ ಅರ್ಚಕ ಕೃಷ್ಣಮೂರ್ತಿ ಭಟ್ ಅವರು ಅಷ್ಟೋತ್ತರ, ಅರ್ಚನೆ ನಡೆಸಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ನಂತರ ಭಕ್ತಾದಿಗಳು ಸಾಮೂಹಿಕವಾಗಿ ಜೀವನದಿಗೆ ಮಹಾ ಆರತಿ ಬೆಳಗಿದರು.

ಈ ಸಂದರ್ಭ ಶ್ರೀ ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ವಿ.ಎನ್. ವಸಂತಕುಮಾರ್, ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಸೇವಾ ಟ್ರಸ್ಟ್‍ನ ಅಧ್ಯಕ್ಷ ಕೆ.ಆರ್. ಶಿವಾನಂದನ್, ಕರ್ನಾಟಕ ರಕ್ಷಣಾ ವೇದಿಕೆ ನಗರಾಧ್ಯಕ್ಷ ಬಿ.ಜೆ. ಅಣ್ಣಯ್ಯ, ಕಾವೇರಿ ನದಿ ಜಾಗೃತಿ ಸಮಿತಿಯ ಸಂಚಾಲಕರಾದ ಡಿ.ಆರ್. ಸೋಮಶೇಖರ್, ಜಗದೀಶ್, ಕೃಷ್ಣ, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಲೀಲಾ, ಲಲಿತಾ ಹಾಗೂ ಬಳಗದ ಸದಸ್ಯರು ಇದ್ದರು. ಇದೇ ಸಂದರ್ಭ ಕೊಪ್ಪ ಸೇತುವೆ ಬಳಿ ಕಾವೇರಿ ಮಾತೆಯ ಪ್ರತಿಮೆಗೆ ಅಭಿಷೇಕ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.