ಕೂಡಿಗೆ:, ಡಿ. 28 ಕುಶಾಲನಗರ ಹೋಬಳಿ ಮಟ್ಟದ ಬಿಜೆಪಿ ಸಭೆ ಕೂಡಿಗೆಯ ಮೂಡ್ಲಿಗೌಡ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸೋಮವಾರಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಎನ್. ಕುಮಾರಪ್ಪ ವಹಿಸಿ ಮಾತನಾಡಿ, ಕಾರ್ಯಕರ್ತರು ಬೂತ್‍ಮಟ್ಟದಲ್ಲಿ ಸಂಘಟಿತರಾಗಿ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಹಕಾರಿಗಳಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಣಿ ಪ್ರಸಾದ್, ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಭೋಗಪ್ಪ ಮಾತನಾಡಿದರು. ವೇದಿಕೆಯಲ್ಲಿ ಕೂಡಿಗೆ ಬೂತ್ ಸಮಿತಿಯ ಅಧ್ಯಕ್ಷ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕುಮಾರ್, ಕೂಡುಮಂಗಳೂರು ಬೂತ್‍ನ ಅಧ್ಯಕ್ಷ ಮಂಜುನಾಥ್, ಮುಳ್ಳುಸೋಗೆ ಬೂತ್‍ನ ಗಿರೀಶ್, ಗುಡ್ಡೆಹೊಸೂರು ಬೂತ್‍ನ ಅಧ್ಯಕ್ಷ ನಂದಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಾನಂದ, ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಕೆ. ವರದ, ಆರ್. ಕೃಷ್ಣ, ಕೇಶವ ರೈ ಸೇರಿದಂತೆ ಕೂಡಿಗೆ, ಕೂಡುಮಂಗಳೂರು, ಮುಳ್ಳುಸೋಗೆ, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗಳ ಬಿಜೆಪಿ ಸದಸ್ಯರುಗಳು ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.

ಈ ಸಂದರ್ಭ ಕೂಡಿಗೆ ಆರ್‍ಎಂಸಿ ಕ್ಷೇತ್ರ ಈ ಸಾಲಿನ ಚುನಾವಣೆಗೆ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಹಿನ್ನೆಲೆಯಲ್ಲಿ ಇದರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾಗಿರುವ ಕೆ.ಟಿ. ಈರಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.