ಸೋಮವಾರಪೇಟೆ, ಸೆ. 21: ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸುವ ಪಡಿತರ ಧಾನ್ಯಗಳನ್ನು ಪಡೆಯಲು ಗ್ರಾಮ ಪಂಚಾಯಿತಿ ಯಿಂದ ಕೂಪನ್ ವಿತರಿಸುವ ಕ್ರಮ ಬಡ ಮಂದಿಗೆ ಅನಾನುಕೂಲ ಉಂಟುಮಾಡಿದೆ. ಈ ಹಿನ್ನೆಲೆ ತಕ್ಷಣ ಕೂಪನ್ ಪದ್ಧತಿಯನ್ನು ರದ್ದುಗೊಳಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ.
ಈ ಬಗ್ಗೆ ಸಂಘಟನೆಯ ಪದಾಧಿಕಾರಿಗಳು ತಾಲೂಕು ತಹಶೀಲ್ದಾರ್ ಕೃಷ್ಣ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸರ್ಕಾರದ ಈ ನಿಯಮದಿಂದ ಕೂಲಿ ಕಾರ್ಮಿಕರು ತೊಂದರೆ ಅನುಭವಿಸು ವಂತಾಗಿದೆ. ಈ ಹಿನ್ನೆಲೆ ತಕ್ಷಣ ಕೂಪನ್ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂದು ಸಂಘಟನೆಯ ತಾಲೂಕು ಅಧ್ಯಕ್ಷ ಸುರೇಶ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಈ ಸಂದರ್ಭ ಸಂಘಟನೆಯ ಪದಾಧಿಕಾರಿಗಳಾದ ರಫೀಕ್, ದೊರೆ, ರಂಗ, ಯತೀಶ್, ಷರೀಫ್, ಕ್ಲೀಟಸ್, ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.