ಕೂಡಿಗೆ, ಅ. 14: ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಸೋಮವಾರಪೇಟೆ ತಾಲೂಕು, ಕುಶಾಲನಗರ ಹೋಬಳಿ ವತಿಯಿಂದ ತಾ. 18 ಮತ್ತು 19 ರಂದು 2016-17ನೇ ಸಾಲಿನ ಕೃಷಿ ಅಭಿಯಾನ ಕಾರ್ಯಕ್ರಮವವನ್ನು ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ತಾ. 18 ರಂದು ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಆರ್. ಶ್ರೀನಿವಾಸ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ವಹಿಸಲಿದ್ದಾರೆ.

ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ. ಕೆ. ರಾಮಪ್ಪ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ತಾ. 19 ರಂದು ನಡೆಯುವ ವಿಜ್ಞಾನಿಗಳೊಂದಿಗೆ ರೈತ ಸಂವಾದ ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ರೋಗ ಶಾಸ್ತ್ರಜ್ಞರು ಡಾ. ವಿರೇಂದ್ರ ಕುಮಾರ್ ಹಾಗೂ ಹಿರಿಯ ವಿಜ್ಞಾನಿಗಳಾದ ಡಾ. ಪ್ರಭಾಕರ್ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯರಾದ ಪಿ.ಎಂ. ಲತೀಫ್, ಎಂ.ಬಿ. ಸುನೀತ, ತಾ.ಪಂ. ಸದಸ್ಯರಾದ ಜಯಣ್ಣ, ಎಂ.ಕೆ. ಚಂಗಪ್ಪ, ಸಬಿತ, ಗಣೇಶ್, ಸುಹಾದ್, ಪುಷ್ಪ ಜನಾರ್ಧನ ಮತ್ತಿತರರು ಆಗಮಿಸಲಿದ್ದಾರೆ ಎಂದು ರೈತರ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಪಿ.ಸಿ. ಪೂಣಚ್ಚ ತಿಳಿಸಿದ್ದಾರೆ.