ಮಡಿಕೇರಿ, ನ. 11: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿÀ ಕೆ.ನಿಡುಗಣೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀಟಾ ಮುತ್ತಣ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ಹಲವಾರು ಸಮಸ್ಯೆಗಳಿದೆ. ಪ್ರವಾಸೋದ್ಯಮ ಇಲಾಖೆ ಯಾವದೇ ಅನುಮತಿಯನ್ನು ಗ್ರಾಮ ಪಂಚಾಯಿತಿಯಿಂದ ಪಡೆಯದೇ ಕಾಮಗಾರಿ ನಡೆಸುತ್ತಿದೆ. ಅಲ್ಲದೇ ಗ್ರಾಮ ಪಂಚಾಯಿತಿಗೆ ಯಾವದೇ ಮಾಹಿತಿ ನೀಡುತ್ತಿಲ್ಲ. ಎಲ್ಲಾ ಕಾಮಗಾರಿಗಳು ಕಳಪೆಯಾಗಿದ್ದು, ಈ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಪಂಚಾಯಿತಿ ಕಟ್ಟಡವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುತ್ತಿದ್ದು, ಸದರಿ ಜಾಗದಲ್ಲಿ 4 ಕುಟುಂಬಗಳು ವಸತಿಯನ್ನು ಕಳೆದುಕೊಂಡಿದ್ದು, ಅವರಿಗೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದರು. ಅಲ್ಲದೆ ಸರಕಾರಿ ಶಾಲೆಯ ಬಳಿ ಜಿಲ್ಲಾ ಪಂಚಾಯಿತಿ ಕಟ್ಟಡದ ಮಣ್ಣನ್ನು ಹಾಕುತ್ತಿರುವ ದರಿಂದ ಶಾಲಾ ಕಾಂಪೌಂಡ್‍ಗೆ ಹಾನಿಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಗುತ್ತಿಗೆದಾರರು ಹಾಗೂ ಹಿರಿಯ ಅಧಿಕಾರಿಗಳು ಬೇಜವಾ ಬ್ದಾರಿಯಿಂದ ವರ್ತಿಸುತ್ತ್ತಿದ್ದಾರೆ. ಜಿಲ್ಲಾ ಪಂಚಾಯಿತಿ ಕಟ್ಟಡದ ಜಾಗದ ಬದಲು 2 ಎಕ್ರೆ ಜಾಗವನ್ನು ವಸತಿ ರಹಿತರಿಗೆ ನೀಡಲು ಗುರುತಿಸಲಾಗಿದೆ. ಈ ಬಗ್ಗೆ ಕಂದಾಯ ಇಲಾಖಾ ಅಧಿಕಾರಿಗಳು ಯಾವದೇ ಕ್ರಮ ವಹಿಸುತ್ತಿಲ್ಲ ಎಂದು ತಿಳಿದರು. ಇದಕ್ಕೆ ಸದಸ್ಯ ಡೀನ್ ಬೋಪಣ್ಣ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ರಾಯ್ ತಮ್ಮಯ್ಯ ಧ್ವನಿ ಗೂಡಿಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ವಹಿಸಲು ಆಗ್ರಹಿಸಿದರು.

ಎಂ.ಪಿ. ಸುನಿಲ್ ಸುಬ್ರಮಣಿ ಅವರು ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿ, ಸೂಕ್ತ ಕ್ರಮ ವಹಿಸಲಾಗುವದೆಂದು ತಿಳಿಸಿದರು.

ಇದೇ ಸಂದರ್ಭ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನ ಸ್ವೀಕರಿಸಿ, ಯಾವದೇ ಜನಪ್ರತಿನಿಧಿಗಳು ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಬೇಕಾಗಿದ್ದು, ಚುನಾವಣೆಯಲ್ಲಿ ಗೆದ್ದ ನಂತರ ಜನರ ಪರವಾಗಿ ಕೆಲಸ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಎಸ್. ಜಾಜಿ, ತಾಲೂಕು ಪಂಚಾಯಿತಿ ಸದಸ್ಯ ರಾಯ್ ತಮ್ಮಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯೆ ಯಾಲದಾಳು ಪದ್ಮಾವತಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜೀವನ್ ಹಾಗೂ ಪಿ.ಡಿ.ಒ., ಕಾರ್ಯದರ್ಶಿಗಳು ಹಾಜರಿದ್ದರು.