ಕೂಡಿಗೆ, ಆ. 10: ಕಾರ್ಯ ಕರ್ತರನ್ನು ಸಂಘಟಿಸುವದರ ಜೊತೆಗೆ ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳು ತಲಪು ವಂತಾಗಬೇಕು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೊಸ ಹೊಸ ಚಿಂತನೆ ಮತ್ತು ಯೋಜನೆಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವದರ ಮೂಲಕ ಯೋಜನೆಯ ಪ್ರಯೋಜನ ಗಳನ್ನು ಪಡೆದುಕೊಳ್ಳಬೇಕೆಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿದ್ದ ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಬೋಗಪ್ಪ ಮಾತನಾಡಿ, ಸ್ಥಳೀಯ ಕಾರ್ಯಕರ್ತರು ತಮ್ಮ ಅಹವಾಲುಗಳನ್ನು ಪಕ್ಷದ ವೇದಿಕೆ ಮೂಲಕ ಚರ್ಚಿಸಿ ಕ್ಷೇತ್ರದ ಗೆಲುವಿಗೆ ಶ್ರಮಿಸಬೇಕೆಂದರು.

ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಕೊಡಗು ಜಿಲ್ಲಾ ಬಿಜೆಪಿ ಎಸ್‍ಟಿ ಮೋರ್ಚಾದ ಅಧ್ಯಕ್ಷ ಎಸ್.ಎನ್. ರಾಜಾರಾವ್, ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಎನ್. ಕುಮಾರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಭಾರತೀಶ್ ಪಕ್ಷದ ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಣಿ ಪ್ರಸಾದ್, ಜಿಲ್ಲಾ ಪಂಚಾಯ್ತಿ ಸದಸ್ಯೆ ಕೆ.ಆರ್. ಮಂಜುಳಾ, ತಾ.ಪಂ. ಸದಸ್ಯ ಡಿ.ಎಸ್. ಗಣೇಶ್, ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ತಾಲೂಕು ಬಿಜೆಪಿ ಕಾರ್ಯದರ್ಶಿ ಕೃಷ್ಣಪ್ಪ, ಕೂಡಿಗೆ ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್‍ಕುಮಾರ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಾನಂದ, ಪಕ್ಷದ ಪ್ರಮುಖರಾದ ಕೆ. ವರದ, ಜಿ.ಎಲ್. ನಾಗರಾಜ್ ಸೇರಿದಂತೆ ಮತ್ತಿತರರು ಇದ್ದರು. ಈ ಸಂದರ್ಭ ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಜಿಲ್ಲಾ ದಲಿತ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಕೆ.ಟಿ. ಈರಯ್ಯ, ಕೂಡು ಮಂಗಳೂರು ಗ್ರಾ.ಪಂ. ಸದಸ್ಯೆ ಸಾವಿತ್ರಿ, ಬಸವನತ್ತೂರು ಗ್ರಾಮದ ಗೀತಾ, ಚಿಕ್ಕತ್ತೂರು ಗ್ರಾಮದ ಸುರೇಶ್ ಸೇರಿದಂತೆ 25ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.