ಮಡಿಕೇರಿ, ಜ. 4: ಅಮ್ಮತ್ತಿ ಕೊಡವ ಸಮಾಜದ ವತಿಯಿಂದ ಪುತ್ತರಿ ಊರೋರ್ಮೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಮೂಕೊಂಡ ಎ. ಬೋಸ್ ದೇವಯ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಂಗಳೂರು ಬಿಬಿಎಂಪಿ ಮಾಜಿ ಸದಸ್ಯ ಕದ್ದಣಿಯಂಡ ಹರೀಶ್ ಬೋಪಣ್ಣ ಮಾತನಾಡಿ, ಕೊಡಗಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ಪ್ರಯತ್ನಿಸುವದಾಗಿ ಭರವಸೆಯಿತ್ತರು. ಬೆಂಗಳೂರು - ಗೋಣಿಕೊಪ್ಪ - ಅಮ್ಮತ್ತಿ ಮೂಲ ನಾಪೋಕ್ಲುವರೆಗೆ ವೊಲ್ವೋ ಬಸ್ ವ್ಯವಸ್ಥೆ ಕಲ್ಪಿಸುವ ಸಂಬಂಧ ಈಗಾಗಲೇ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗಿದೆ. ಅಮ್ಮತ್ತಿ ಕೊಡವ ಸಮಾಜದ ಆಡಿಟೋರಿಯಂ ನಿಮಾರ್ಣಕ್ಕೆ ಸರ್ಕಾರದಿಂದ 10 ಲಕ್ಷ ರೂ. ಕೊಡಿಸುವದಾಗಿ ಭರವಸೆಯಿತ್ತರು.
ಇದೇ ಸಂದರ್ಭ ಹರೀಶ್ ಬೋಪಣ್ಣ ಅವರಿಗೆ ಒಡಿಕತ್ತಿ ನೀಡಿ ಸನ್ಮಾನಿಸಲಾಯಿತು.