ಸುಂಟಿಕೊಪ್ಪ : ವಿದ್ಯಾರ್ಥಿಗಳು ಶಿಸ್ತಿನಿಂದ ನಡೆದುಕೊಂಡರೆ ಬದುಕಿನಲ್ಲಿ ಏನಾದರೂ ಸಾಧನೆ ಮಾಡಬಹುದು ಎಂದು ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ ಅಭಿಪ್ರಾಯಪಟ್ಟರು. ಸುಂಟಿಕೊಪ್ಪ ಗ್ರಾಮ ಪಂಚಾಯತಿ ಮತ್ತು ರಾಷ್ಟ್ರೀಯ ಕಬ್ಬಗಳ ಆಚರಣಾ ಸಮಿತಿಯ ವತಿಯಿಂದ ಇಲ್ಲಿನ ಜಿಯಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ 70ನೇ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಸಾಧನೆಗೆ ಒಂದು ಗುರಿ ಇಟ್ಟುಕೊಳ್ಳಬೇಕು,ಅದಕ್ಕೆ ಹಿಂದೇಟು ಹಾಕದೇ ತಮಗೆ ತೋಚಿದ ಕೆಲಸವನ್ನು ನಿಷ್ಠೆಯಿಂದ ನಿರ್ವಹಿಸಬೇಕು, ತಮಗೆ ನೀಡಿರುವ ಕೆಲಸವನ್ನು ಜವಾಬ್ದಾರಿಯುತವಾಗಿ ಮತ್ತು ಶ್ರದ್ಧಾಪೂರ್ವಕವಾಗಿ ಮಾಡಬೇಕು. ಸಣ್ಣ ಸಣ್ಣ ವಿಷಯಗಳಿಗೂ ಇನ್ನೊಬ್ಬರನ್ನು ದೂಷಿಸಬಾರದು, ಎಲ್ಲರಲ್ಲೂ ವಿಚಾರವಂತಿಕೆಯ ಗುಣ ಇರಬೇಕು ಎಂದು ಕರೆ ನೀಡಿದರು. ದಿನದ ಮಹತ್ವದ ಕುರಿತು ಸರಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕಿ ಟಿ.ಕೆ. ಪುಷ್ಪಾ ಮಾತನಾಡಿದರು. ಸುಂಟಿಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್ ನೆರವೇರಿಸಿದರು.ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಮತ್ತು ಎಎಸ್‍ಐ ಪಾರ್ಥ ಅವರ ನೇತೃತ್ವದಲ್ಲಿ ಪೊಲೀಸ್ ಇಲಾಖೆಯಿಂದ ಧ್ವಜವಂದನೆ ಮತ್ತು ಪಥಸಂಚಲನ ನಡೆಯಿತು.

ಈ ಸಂದರ್ಭ ನಿವೃತ್ತ ಯೋಧ ಶಿವರಾಮ ಬಡಾವಣೆಯ ನಿವಾಸಿ ಶೇಖರ್, ಸುಂಟಿಕೊಪ್ಪ ಹೋಬಳಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ಚರಿಷ್ಮಾ, ಎಸ್.ಎಸ್.ಎಲ್.ಸಿ.ಯಲ್ಲಿ ಅಧಿಕ ಅಂಕಗಳಿಸಿದ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿ ದೀಪಕ್ ಹಾಗೂ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಪ್ಸತ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸುಂಟಿಕೊಪ್ಪ ನಾಡ ಕಚೇರಿಯ ಉಪತಹಶೀಲ್ಧಾರ್ ಚಂದ್ರಶೇಖರಯ್ಯ, ಗ್ರಾಮ ಪಂಚಾಯಿತಿ ಪಿಡಿಓ ಜಯಣ್ಣ, ತಾಲೂಕು ಪಂಚಾಯತಿ ಸದಸ್ಯೆ ಓಡಿಯಪ್ಪನ ವಿಮಲಾವತಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಾಗಭೂಷಣ್ ಭಟ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಡಿ. ನರಸಿಂಹ, ಮಹಿಳಾ ಸಂಘದ ಅಧ್ಯಕ್ಷೆ ಲೀಲಾ ಮೇದಪ್ಪ, ಗ್ರಾಮ ಪಂಚಾಯತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು, ಶಾಲಾ - ಕಾಲೇಜಿನ ಮುಖ್ಯಸ್ಥರು, ಮಾಜಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಇದ್ದರು. ಶಿಕ್ಷಕ ಟಿ.ಜಿ. ಪ್ರೇಮ್ ಕುಮಾರ್ ಸ್ವಾಗತಿಸಿ, ಲೀಲಾ ಮೇದಪ್ಪ ವಂದಿಸಿ, ಶಿಕ್ಷಕ ಸೋಮುಶೇಖರ್ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.ಮೂರ್ನಾಡು : ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಧ್ವಜ ಸ್ತಂಭವನ್ನು ಉದ್ಘಾಟಿಸಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಇಲ್ಲಿನ ಪಶು ಚಿಕಿತ್ಸಾಲಯದಲ್ಲಿ ಮೂರ್ನಾಡು ಹೋಬಳಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನೂತನವಾಗಿ ನಿರ್ಮಿಸಲಾದ ಧ್ವಜ ಸ್ತಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ಮಾಜಿ ಅಧ್ಯಕ್ಷ ಡಾ. ಮೇಚಿರ ಸುಭಾಶ್ ನಾಣಯ್ಯ ಉದ್ಘಾಟಿಸಿದರು. ಪಶು ವೈದ್ಯಾಧಿಕಾರಿ ಡಾ. ಪ್ರಸನ್ನ ಧ್ವಜಾರೋಹಣಗೈದರು. ಮೂರ್ನಾಡು ಹೋಬಳಿ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಮುಂಡಂಡ ವಿಜು ತಿಮ್ಮಯ್ಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ, ಉಪಾಧ್ಯಕ್ಷ ಕುಂಞಪ್ಪ ಪವಿತ್ರ, ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಕೊಂಪುಳೀರ ಗಣೇಶ್ ಬೋಪಯ್ಯ, ಪಶು ವೈದ್ಯ ಡಾ. ಪ್ರಸನ್ನ, ಮಹಿಳಾ ಮೋರ್ಚಾ ಕಾರ್ಯದರ್ಶಿ ಮಮತ, ಸದಸ್ಯರುಗಳಾದ ಕೊಳುಮಾಡಂಡ ಜಾನಕಿ ಚಂಗಪ್ಪ, ಜಯಂತಿ, ಚೆಟ್ಟಿಮಾಡ ಚೇತನ, ಅಚ್ಚಕಾಳೀರ ಕಮಲ, ಗೀತಾ ಪಟ್ಟು, ಎ.ಪಿ. ತುಳಸಿ, ಸುಜಾತ ಶೇಖರ್, ಯಶೋಧ, ಪೋತಂಡ ಹೇಮಲತ, ಅಪ್ಪಚಂಡ ಸರಸ್ವತಿ ಕಾವೇರಪ್ಪ, ಕೂಡಿಗೆ : ಇಲ್ಲಿನ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ 70ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ವಿದ್ಯಾರ್ಥಿ ಪರಿಷತ್ ಉಪಾಧ್ಯಕ್ಷ ಯದುಕುಮಾರ್ ನೆರವೇರಿಸಿದರು. ನಂತರ ದಿನದ ಮಹತ್ವವನ್ನು ಕುರಿತು ಮಾತನಾಡಿದರು. ಶಾಲಾ ವಿದ್ಯಾರ್ಥಿಗಳಿಂದ ನಡೆದ ಪಥ ಸಂಚಲನ ಆಕರ್ಷಿಸಿತು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ವಿಜಯ್ ಸೇರಿದಂತೆ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ಪರಿಷತ್ ಸದಸ್ಯರು ಇದ್ದರು.

ಕೂಡಿಗೆ : ರಾಮೇಶ್ವರ ಸಹಕಾರ ಸಂಘದಲ್ಲಿ 70ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್‍ಕುಮಾರ್ ನೆರವೇರಿಸಿದರು. ಈ ಸಂದರ್ಭ ಬ್ಯಾಂಕಿನ ನಿರ್ದೇಶಕ ಎಸ್.ಎನ್. ರಾಜಾರಾವ್, ಟಿ.ಪಿ. ಹಮೀದ್, ಟಿ.ಕೆ. ವಿಶ್ವನಾಥ್, ಮಂಜಯ್ಯ, ಕೆ.ಜೆ. ಮೋಹಿನಿ, ಬ್ಯಾಂಕಿನ ವ್ಯವಸ್ಥಾಪಕಿ ಮೀನಾ ಹಾಗೂ ಸಿಬ್ಬಂದಿಗಳಾದ ಸೋಮಶೇಖರ್, ನಾಗರಾಜ್, ಶ್ರೀನಿವಾಸ್, ಸೇರಿದಂತೆ ಮತ್ತಿತರರು ಇದ್ದರು.ನಾಪೆÇೀಕ್ಲು : ಸ್ಥಳೀಯ ವಾಹನ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ವಿಜೃಂಭಣೆಯಿಂದ 70 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭ ಎಲ್ಲಾ ವಾಹನಗಳು ನಗರದಲ್ಲಿ ಮೆರವಣಿಗೆಯಲ್ಲಿ ಸಾಗುವ ಮೂಲಕ ಮುಖ್ಯ ಸ್ಥಳವಾದ ಸಂಘದ ಕಚೇರಿಗೆ ಆಗಮಿಸಿದರು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಕೆ. ಮುರುಳಿಧರ್, ಗ್ರಾ.ಪಂ. ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಠಾಣಾಧಿಕಾರಿ ಬಿ.ಎಸ್. ವೆಂಕಟೇಶ್ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವೀಕರಿಸಿದರು. ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ಉಪಾಧ್ಯಕ್ಷ ಮೂವೇರ ವಿನು, ಕಾರ್ಯದರ್ಶಿ ಲೋಕೇಶ್, ಮಾಜಿ ಅಧ್ಯಕ್ಷ ಕೆ.ಎಂ. ರಮೇಶ್, ಸಾಬು ಸೀತಾರಾಮ ಮತ್ತಿತರರು ಹಾಜರಿದ್ದರು.

ಮೂರ್ನಾಡು : ಕೋಡಂಬೂರು ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾಸಂಸ್ಥೆ ಕಾರ್ಯದರ್ಶಿ ಡಾ. ಕುಂಞÂ ಅಬ್ದುಲ್ಲ ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಕಿ ಜಲಜಾಕ್ಷಿ ಮುಖ್ಯ ಅತಿಥಿಗಳಾಗಿ ಆಗಮಿಸಿ ದಿನದ ಮಹತ್ವದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸ್ಮಿತಾ ಪೂಣಚ್ಚ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಎ.ಎಸ್. ಶೋಭಾ ಅಧ್ಯಕ್ಷತೆ ವಹಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಭಾಷಣ, ಸಾಮೂಹಿಕ ಗೀತೆ ಸ್ಪರ್ಧೆಗಳನ್ನು ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಕೂಡಿಗೆ : ಕೂಡಿಗೆ ಗ್ರಾ.ಪಂ ವತಿಯಿಂದ ಗ್ರಾ.ಪಂ. ಆವರಣದಲ್ಲಿ 70ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾ.ಪಂ. ಅಧ್ಯಕ್ಷೆ ಪ್ರೇಮಾಲೀಲಾ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್, ಗ್ರಾ.ಪಂ.ನ ಎಲ್ಲಾ ಸದಸ್ಯರುಗಳು ಹಾಗೂ ಗ್ರಾ.ಪಂ. ಆಡಳಿತಾಧಿಕಾರಿ ಗಗನ್, ಸ್ಥಳೀಯ ಅಂಜೆಲಾ ವಿದ್ಯಾನಿಕೇತನ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು, ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.

ಸುಂಟಿಕೊಪ್ಪ : ಇಲ್ಲಿನ ಮಾರುಕಟ್ಟೆಯ ಬಳಿ ಇರುವ ತಲೆಹೊರೆ ಕಾರ್ಮಿಕರ ಸಂಘದ ವತಿಯಿಂದ 70ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್ ನೆರವೇರಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಮುತ್ತಯ್ಯ, ಕುಶಾಲನಗರ ಜಿಲ್ಲಾ ಪಂಚಾಯತಿ ಸದಸ್ಯ ಪಿ.ಎಫ್ ಲತೀಫ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಂ.ಎ. ವಸಂತ, ಗ್ರಾಮ ಪಂಚಾಯತಿ ಸದಸ್ಯ ಕೆ.ಇ.ಕರಿಂ, ಸಂಘದ ಪದಾಧಿಕಾರಿಗಳು ಇನ್ನಿತರರು ಇದ್ದರು.

ಪೊಲೀಸ್ ಠಾಣೆ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎಸ್. ಐ. ಅನೂಪ್ ಮಾದಪ್ಪ ದ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭ ಪೊಲೀಸ್ ಸಿಬ್ಬಂದಿಯಿಂದ ಧ್ವಜ ವಂದನೆ ನಡೆಯಿತು.

ಶಾಲಾ-ಕಾಲೇಜು : ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೋಮಯ್ಯ ಎಂ.ಪಿ ಧ್ವಜಾರೋಹಣ ನೆರವೇರಿಸಿದರು. ದಿನದ ಮಹತ್ವ ಕುರಿತು ಕೊಡಗು ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೋಮುಶೆಖರ್ ಮಾತನಾಡಿದರು. ಮುಖ್ಯ ಶಿಕ್ಷಕ ಬಾಲಕೃಷ್ಣ, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ಸರಕಾರಿ ಪಿಯು ಕಾಲೇಜಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವೈ.ಯಂ. ಕರುಂಬಯ್ಯ ಧ್ವಜಾರೋಹಣವನ್ನು ನೆರವೇರಿಸಿದರು. ಪ್ರಾಂಶುಪಾಲ ಸೋಮುಚಂದ್ರ, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಸಂಸ್ಥೆಯ ಮುಖ್ಯಸ್ಥ ಫಾದರ್ ಎಡ್ವರ್ಡ್ ವಿಲಿಯಂ ಸಾಲ್ಡಾನ ನೆರವೇರಿಸಿದರು, ಮುಖ್ಯ ಶಿಕ್ಷಕ ಸೆಲ್ವರಾಜು ಶಿಕ್ಷಕರು ಇದ್ದರು.ಶ್ರೀಮಂಗಲ : ಭಾರತ ದೇಶದಲ್ಲಿ ಎಲ್ಲಾ ಧರ್ಮದವರು ಸೌಹಾರ್ಧತೆಯಿಂದ ಜೀವಿಸುತ್ತಿದ್ದು ಎಲ್ಲಾ ಸೇರಿ ದೇಶವನ್ನು ಕಟ್ಟುವ ಕೆಲಸವಾಗಬೇಕು. ದೇಶದ ಅಖಂಡತೆ ಭದ್ರತೆಗೆ ಹಾಗೂ ಶಾಂತಿ ನೆಮ್ಮದಿಗೆ ದಕ್ಕೆ ತರುವಂತಹ ಹಿಂಸಾತ್ಮಕವಾದ ಭಯೋತ್ಪಾದನೆಯನ್ನು ಇಸ್ಲಾಂ ಧರ್ಮ ಎಂದೂ ಒಪ್ಪುವದಿಲ್ಲವೆಂದು ಬೇಗೂರು ಮಾಪಿಳ್ಳೆತೋಡು ಮುಸಾಬೀರ್ ಇಸ್ಲಾಂ ಮದ್ರಸಾದ ಧರ್ಮಗುರು ಹಾಫಿಲ್ ಸೌಕತ್ ಆಲಿ ಸೂಫಿ ಹೇಳಿದರು.

ಬೇಗೂರು ಮಾಪಿಳೆತೋಡು ಜುಮ್ಮಾ ಮಸೀದಿಯಲ್ಲಿ 70ನೇ ಸ್ವಾತಂತ್ರ್ಯೋತ್ಸವದ ಸಂದರ್ಭ ರಾಷ್ಟ್ರ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. ಈ ಸಂಧರ್ಭ ಜುಮ್ಮ ಮಸೀದಿಯ ಉಪಕಾರ್ಯದರ್ಶಿ ನಜೀರ್, ಪಧಾದಿಕಾರಿಗಳಿಂದ ಜುಬೇರ್, ಹಿರಿಯರಾದ ಅಹಮ್ಮದ್ ಹಾಜಿ, ಭಾಗವಹಿಸಿದ್ದರು. ಹದಿಫ್ ಮುಸ್ಲಿಯರ್ ಸ್ವಾಗತಿಸಿ ನಿರೂಪಿಸಿ ವಂದಿಸಿದರು.ನಾಪೆÉÇೀಕ್ಲು : ನಾಪೆÉÇೀಕ್ಲು ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಕ್ಷ ಕರವಂಡ ಲವ ನಾಣಯ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಪ್ರಾಂಶುಪಾಲೆ ಉದಿಯಂಡ ಪದ್ಮಜ ಮತ್ತಿತರರು ಹಾಜರಿದ್ದರು.

ಪ್ರಾಥಮಿಕ ಶಾಲೆ : ನಾಪೆÇೀಕ್ಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಜಿ.ಪಂ. ಮಾಜಿ ಸದಸ್ಯೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತೆ ಅಧ್ಯಕ್ಷೆ ಕೆ.ಎಂ. ಪುಷ್ಟ, ಮಾಜಿ ಅಧ್ಯಕ್ಷ ಕೆ.ಎಂ. ರಮೇಶ್, ಶಾಲೆಯ ಮುಖ್ಯ ಶಿಕ್ಷಕಿ ಜಾನ್ಸಿರಾಣಿ ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು.ಕೂಡಿಗೆ : ಕೂಡಿಗೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 70ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾ.ಪಂ. ಸದಸ್ಯ ಕೆ.ಟಿ. ಈರಯ್ಯ ನೆರವೇರಿಸಿ ಸ್ವಾತಂತ್ರ್ಯೋತ್ಸವದ ದಿನದ ಸಂದೇಶ ನೀಡಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಸಹಕಾರ ಕೂಟದ ಮಾಜಿ ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟಿ, ಶಾಲಾಭಿವೃದ್ಧಿಯ ಸಮಿತಿಯ ಅಧ್ಯಕ್ಷ ಕೆ.ಟಿ. ವೆಂಕಟೇಶ್, ಶಾಲಾ ಮುಖ್ಯ ಶಿಕ್ಷಕಿ ಪಾರ್ವತಿ, ಶಾಲಾಭಿವೃದ್ಧಿ ಸಮಿತಿಯ ನಿರ್ದೇಶಕರು, ಗ್ರಾಮದ ಯುವಕ ಸಂಘದ ಅಧ್ಯಕ್ಷ ಪ್ರವೀಣ್ ಸೇರಿದಂತೆ ನಿರ್ದೇಶಕರು, ಶಾಲಾ ಶಿಕ್ಷಕಿಯರಾದ ಭಾಗ್ಯ, ವಾಣಿ, ಹಾಜರಿದ್ದು, ವಿದ್ಯಾರ್ಥಿಗಳಿಂದ ಪಥಸಂಚಲನ ಹಾಗೂ ಭಾಷಣ ಸ್ಪರ್ಧೆಗಳು ನಡೆದವು.

ಸೋಮವಾರಪೇಟೆ: ಇಲ್ಲಿನ ಉದಯ ವಲ್ರ್ಡ್‍ನ ಸಿಬ್ಬಂದಿಗಳು ರಾಷ್ಟ್ರಧ್ವಜದ ಬಣ್ಣವನ್ನು ಬಿಂಬಿಸುವ ದಿರಿಸು ಧರಿಸಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸಿದರು. ಸಿಬ್ಬಂದಿಗಳಾದ ಪ್ರಿಯಾ, ಲಕ್ಷ್ಮೀ, ರೇಖಾ ಮತ್ತು ಮೋನಿಕಾ ಅವರುಗಳು ಕೇಸರಿ ಬಣ್ಣದ ವೇಲ್, ಬಿಳಿ ಬಣ್ಣದ ಟಾಪ್ ಹಾಗೂ ಹಸಿರು ಬಣ್ಣದ ಪ್ಯಾಂಟ್ ಧರಿಸಿ ರಾಷ್ಟ್ರ ಧ್ವಜದ ಬಣ್ಣಗಳಿಂದ ಗಮನಸೆಳೆದರು.