ಶನಿವಾರಸಂತೆ, ಜು. 26: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2016-17ನೇ ಸಾಲಿನ ವಲಯ ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ ಮುಖ್ಯ ಶಿಕ್ಷಕಿ ಎಚ್.ಎಲ್. ಪದ್ಮಾವತಿ ಅಧ್ಯಕ್ಷತೆಯಲ್ಲಿ ನಡೆಯಿತು.
ಶೈಕ್ಷಣಿಕ ವರ್ಷದ ಕ್ರೀಡಾಕೂಟವನ್ನು ಅಂಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಹೋಬಳಿಯ 18 ಶಾಲೆಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತವೆ.
ಸಭೆಯಲ್ಲಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಪಿ. ಕರುಂಬಯ್ಯ, ಅಂಕನಹಳ್ಳಿ ಶಾಲಾ ಮುಖ್ಯ ಶಿಕ್ಷಕಿ ಸಾವಿತ್ರಿ, ಚಿಕ್ಕಕೊಳತ್ತೂರು ಗ್ರಾಮದ ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್, ಕೇಂದ್ರ ಶಾಲಾ ಕಾರ್ಯದರ್ಶಿ ಮಲ್ಲಿಕಾರ್ಜುನ್ ಹಾಗೂ 18 ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.