ಸಿದ್ದಾಪುರ, ಜ. 3: ಚೆಟ್ಟಳ್ಳಿ ಸಮೀಪದ ಕಂಡಕೆರೆಯಲ್ಲಿ ಬ್ರೈಟ್ ಸ್ಪೋಟ್ರ್ಸ್ ಮತ್ತು ರಿಕ್ರಿಯೇಶನ್ ಕ್ಲಬ್‍ನ ವತಿಯಿಂದ ನಿರ್ಮಿಸಲಾದ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದ ಸಭಾ ಕಾರ್ಯಕ್ರವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್ ಉದ್ಘಾಟಿಸಿದರು. ಬಳಿಕ ಮಾತನಾಡಿ, ಕ್ರೀಡೆ ಮನುಷ್ಯನ ಮಾನಸಿಕ ಮತ್ತು ದೈಹಿಕ ಬೆಳೆವಣಿಗೆಗೆ ಸಹಕಾರಿ. ಕ್ರೀಡೆಯ ಮೂಲಕ ಸಾಮರಸ್ಯ ಬದುಕು ನಿರ್ಮಾಣ ವಾಗಬೇಕು. ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗೆ ಗ್ರಾಮಸ್ಥರು ಹೆಚ್ಚಿನ ಸಹಕಾರ ನೀಡುವ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ಮುಂದೆ ತರುವ ಪ್ರಯತ್ನ ಮಾಡಬೇಕೆಂದು ಹೇಳಿದರು

ಚೆಟ್ಟಳ್ಳಿ ಗ್ರಾ.ಪಂ. ಅಧ್ಯಕ್ಷೆ ವತ್ಸಲ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗೆ ಹೆಚ್ಚು ಉತ್ತೇಜನ ದೊರೆಯಬೇಕಿದೆ. ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ಗ್ರಾಮಾಂತರ ಪ್ರದೇಶಗಳ ಕ್ರೀಡಾ ಸಂಘ-ಸಂಸ್ಥೆಗಳಿಗೆ ಹೆಚ್ಚು ಅನುದಾನದ ಸೌಲಭ್ಯಗಳನ್ನು ಒದಗಿಸಬೇಕೆಂದರು

ಬ್ರೈಟ್ ಸ್ಪೋಟ್ರ್ಸ್ ಮತ್ತು ರಿಕ್ರಿಯೇಶನ್ ಕ್ಲಬ್‍ನ ವತಿಯಿಂದÀ ನಿರ್ಮಿಸಲಾದ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಸ್ಥಳೀಯ ಪ್ರಮುಖರಾದ ಮುಹಮ್ಮದ್ ಆಲಿ ಉದ್ಘಾಟಿಸಿದರು. ಈ ಸಂದರ್ಭ ಸ್ಥಳೀಯ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಾಬು ಕೆ. ನಾಯರ್, ಮಾಜಿ ಸೈನಿಕರಾದ ಕೆ.ಕೆ. ಅಶೋಕ್, ಚಂದ್ರನ್, ಎಂ. ರವಿ, ಗ್ರಾ.ಪಂ. ಸದಸ್ಯ ರಫೀಕ್ ಕುಟ್ಟಿ, ತೀರ್ಥಕುಮಾರ್, ಮದು ಸೂದನ್, ವೆಲ್ಫೆರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಮುಸ್ತಫಾ, ಜಿಲ್ಲಾ ವಕ್ತಾರ ಕೆ.ಎಂ. ಮುಹಮ್ಮದ್, ಪ್ರಮುಖರಾದ ಸಿ.ಹೆಚ್. ಅಪ್ಸರ್, ಶಶಿ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.