ಶ್ರೀಮಂಗಲ, ಜ. 9: ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವದರಿಂದ ದೈಹಿಕ, ಮಾನಸಿಕ ಸದೃಢತೆ ಕಾಯ್ದುಕೊಳ್ಳು ವದರೊಂದಿಗೆ ಬದುಕಿನ ಸಂಕಷ್ಟ ಗಳನ್ನು ಎದುರಿಸುವ ಸಾಮಥ್ರ್ಯ ಹೆಚ್ಚುತ್ತದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿಪ್ರಾಯ ವ್ಯಕ್ತ ಪಡಿಸಿದರು.
ಶ್ರೀಮಂಗಲ ಸಂಯುಕ್ತ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗ ವಹಿಸಿದ್ದ ಕೊಡಗು ಡಿ.ಸಿ.ಸಿ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎನ್.ಪಿ. ಮುತ್ತಣ್ಣ ಮಾತನಾಡಿ, ಕ್ರೀಡೆ ಮತ್ತು ಶಿಕ್ಷಣ ಒಂದೇ ಮುಖದ ಎರಡು ನಾಣ್ಯಗಳಿದ್ದಂತೆ. ಕ್ರೀಡೆಯಿಂದ ಶಿಕ್ಷಣವನ್ನು ಅಭಿವೃದ್ಧಿ ಪಡಿಸಿಕೊಳ್ಳಬಹುದು. ಶಿಕ್ಷಣವು ಪರಿಪೂರ್ಣವಾಗಬೇಕಾದರೆ ಕ್ರೀಡೆಯ ಅವಶ್ಯಕತೆಯು ಇರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಮಂಗಲ ಜೂನಿಯರ್ ಕಾಲೇಜಿನ ಅಧ್ಯಕ್ಷ ಮಂದ್ರೀರ ಪಿ. ವಿಷ್ಣು ಮಾತನಾಡಿ, ಶಿಸ್ತು, ಕ್ರೀಡೆ, ಸಮಯಪಾಲನೆ ಮನುಷ್ಯನ ಜೀವನವನ್ನು ರೂಪಿಸುತ್ತದೆ ಎಂದರು.
ಶ್ರೀಮಂಗಲ ಯೂನಿಯನ್ ಬ್ಯಾಂಕಿನ ವ್ಯವಸ್ಥಾಪಕ ಓಮನ್ ವರ್ಗಿಸ್, ಶ್ರೀಮಂಗಲ ಜೂನಿಯರ್ ಕಾಲೇಜಿನ ಉಪಾಧ್ಯಕ್ಷ ಮಚ್ಚಮಾಡ ಸುಬ್ರಮಣಿ, ಕಾರ್ಯದರ್ಶಿ ಕಟ್ಟೇರ ಸುಶೀಲ, ಪ್ರಾಂಶುಪಾಲ ಕೋಟ್ರಂಗಡ ಚಂಗಪ್ಪ, ಪ್ರೌಡಶಾಲೆಯ ಹಿರಿಯ ಶಿಕ್ಷಕಿ ಹೆಚ್.ಬಿ. ರತ್ನಮ್ಮ, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.