ಕುಶಾಲನಗರ, ಆ. 27: ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿಯಲ್ಲಿ ಕುಶಾಲನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಸ್ಥಳೀಯ ಫಾತಿಮಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಕೂಡಿಗೆ ಡಯಟ್ ಪ್ರಾಂಶುಪಾಲ ದೊಡ್ಡಮಲ್ಲಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಗತ್ಯ ಪ್ರೋತ್ಸಾಹ ನೀಡುವದು ಶಿಕ್ಷಕರು ಮತ್ತು ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಮಾತನಾಡಿ, ವಿದ್ಯಾರ್ಥಿಗಳು ಓದಿನೊಂದಿಗೆ ಕಲೆ, ಸಾಹಿತ್ಯ ಹಾಗೂ ಸಾಂಸ್ಕøತಿಕ ಚಟುವಟಿಕೆಗಳತ್ತ ಒಲವು ತೋರಬೇಕಿದೆ ಎಂದು ಕರೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕಿ ಜ್ಯುನಿತ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಸದಸ್ಯೆ ಪುಷ್ಪಾ ಜನಾರ್ಧನ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ, ಕ್ಷೇತ್ರ ಸಮನ್ವಯಾಧಿಕಾರಿ ಸುರೇಶ್, ಶಿಕ್ಷಣ ಸಂಯೋಜನಾಧಿಕಾರಿ ವಸಂತ್, ನಾಗರಾಜು ಪಾಲ್ಗೊಂಡಿದ್ದರು.

ಈ ಸಂದರ್ಭ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಕಲೆಗಳ ಪ್ರದರ್ಶನ ನಡೆಯಿತು.