ಕುಶಾಲನಗರ, ಆ. 11: ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುವ ಖಾಸಗಿ ವಾಹನಗಳ ಮೇಲೆ ಹೇರಿರುವ ನಿರ್ಬಂಧಕ್ಕೆ ವಿನಾಯಿತಿ ನೀಡ ಬೇಕೆಂದು ಆಗ್ರಹಿಸಿ ವಿದ್ಯಾರ್ಥಿ ಪೋಷಕರು ಜಿಲ್ಲಾಧಿಕಾರಿ ಡಾ.ವಿ.ಆರ್. ಡಿಸೋಜ ಅವರಿಗೆ ಮನವಿ ಸಲ್ಲಿಸಿದರು.

ಕುಶಾಲನಗರದ ನಾಡಕಚೇರಿಗೆ ಜಿಲ್ಲಾಧಿಕಾರಿ ಡಾ.ವಿ.ಆರ್.ಡಿಸೋಜ ಅವರು ಭೇಟಿ ನೀಡಿದ ಸಂದರ್ಭ ಮನವಿ ಸಲ್ಲಿಸಿ ಖಾಸಗಿ ವಾಹನÀಗಳ ಮೇಲೆ ಹೇರಿರುವ ಕೆಲವು ನಿರ್ಬಂಧಗಳಿಗೆ ವಿನಾಯಿತಿ ಕಲ್ಪಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಮುಖರಾದ ವಿ.ಪಿ.ಶಶಿಧರ್, ಜಿಲ್ಲೆಯ ಭೌಗೋಳಿಕ ಮತ್ತು ಆರ್ಥಿಕ ಪರಿಸ್ಥಿತಿಯ ಅನುಗುಣವಾಗಿ ಜನತೆ ಖಾಸಗಿ ವಾಹನಗಳಿಗೆ ಅವಲಂಬಿತರಾಗಿದ್ದಾರೆ. ಗ್ರಾಮಾಂತರ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಸಾರಿಗೆ ಬಸ್ ಸಂಚಾರವಿಲ್ಲದ ಕಾರಣ ವಿದ್ಯಾರ್ಥಿ ಗಳು ಹಾಗೂ ಕಾರ್ಮಿಕರು ಅನಿವಾರ್ಯವಾಗಿ ಖಾಸಗಿ ವಾಹನಗಳನ್ನು ಅವಲಂಬಿಸಬೇಕಿದೆ.

ವಿದ್ಯಾರ್ಥಿಗಳು ಹಾಗೂ ಕಾರ್ಮಿಕರನ್ನು ಕರೆದೊಯ್ಯುವ ಆಟೋ, ಜೀಪ್, ಮ್ಯಾಕ್ಸಿ ಕ್ಯಾಬ್‍ಗಳಿಗೆ ಆರ್‍ಟಿಓ ಇಲಾಖಾ ಅಧಿಕಾರಿಗಳು ಹೆಚ್ಚಿನ ಮೊತ್ತದ ದಂಡ ವಿಧಿಸಿರುವ ಹಿನೆÀ್ನಲೆಯಲ್ಲಿ ಖಾಸಗಿ ವಾಹನಗಳು ತಮ್ಮ ಕಾರ್ಯವನ್ನು ಸ್ಥಗಿತಗೊಳಿಸಿದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನಾನುಕೂಲ ಉಂಟಾಗಲಿದೆ.

ಈ ನಿಟ್ಟಿನಲ್ಲಿ ಖಾಸಗಿ ವಾಹನಗಳಿಗೆ ಕೆಲವು ಕಾನೂನುಗಳನ್ನು ಸಡಿಲಗೊಳಿಸಿ ಕಾರ್ಯ ನಿರ್ವಹಿಸಬೇಕಾದ ಪರಿಸ್ಥಿತಿ ಉಂಟಾಗಿರುವ ಕಾರಣ ಜಿಲ್ಲಾಡಳಿತ ಖಾಸಗಿ ವಾಹನಗಳ ಮೇಲಿನ ಕೆಲವು ನಿರ್ಬಂಧವನ್ನು ಸಡಿಲಗೊಳಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು.

ಈ ಸಂದರ್ಭ ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಇದ್ದರು.

ಮನವಿ ಸಲ್ಲಿಕೆ ಸಂದರ್ಭ ಜಿಲ್ಲಾ ಪಂಚಾಯ್ತಿ ಸದಸ್ಯೆ ಕೆ.ಪಿ.ಚಂದ್ರಕಲಾ, ಕುಶಾಲನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪಟ್ಟಣ ಪಂಚಾಯ್ತಿ ಸದಸ್ಯ ಪ್ರಮೋದ್ ಮುತ್ತಪ್ಪ, ಫಜ್ಲುಲ್ಲಾ, ಕೂಡಾ ಅಧ್ಯಕ್ಷ ಎಸ್.ಎನ್.ನರಸಿಂಹಮೂರ್ತಿ, ಛೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ ಅಧ್ಯಕ್ಷÀ ಟಿ.ಆರ್. ಶರವಣಕುಮಾರ್, ಹೆಲೆನ್ ಮತ್ತಿತರರು ಇದ್ದರು.