ವೀರಾಜಪೇಟೆ, ನ. 1: ಕನ್ನಡ ನಾಡಿನ ಗಡಿ ರಕ್ಷಣೆ ವಿಚಾರದಲ್ಲಿ ಕನ್ನಡ ಪರ ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾದದ್ದು ಎಂದು ವೀರಾಜಪೇಟೆ ತಹಶೀಲ್ದಾರ್ ಮಹಾದೇವಸ್ವಾಮಿ ಹೇಳಿದರು.ತಾಲೂಕು ಮೈದಾನದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜಿಸ ಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದರು.