ಮಡಿಕೇರಿ, ಆ. 4: ಡಿವೈಎಸ್‍ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ತನಿಖೆಯನ್ನು ಸಿಐಡಿಯೇ ನಡೆಸುವಂತೆ ರಾಜ್ಯ ಉಚ್ಛನ್ಯಾಯಾಲಯ ನಿರ್ದೇಶನ ನೀಡಿದೆ.

ಈ ಕುರಿತು ಖಚಿತ ಪಡಿಸಿರುವ ಸಿಐಡಿ ಅಧಿಕಾರಿಗಳು ತಾ.5 ರಂದು (ಇಂದು) ಜಿಲ್ಲೆಗೆ ಆಗಮಿಸಿ ತನಿಖೆ ಆರಂಭಿಸಲಿದ್ದಾರೆ. ಪ್ರಕರಣ ನಡೆದ ಬಳಿಕ ಸರ್ಕಾರ ಸಿಐಡಿ ತನಿಖೆಗೆ ಪ್ರಕರಣವನ್ನು ವಹಿಸಿತ್ತು. ಸಿಬಿಐ ತನಿಖೆಯೇ ನಡೆಯಬೇಕೆಂದು ರಾಜ್ಯವ್ಯಾಪಿ ಆಗ್ರಹವಿತ್ತಾದರೂ ರಾಜ್ಯ ಸರ್ಕಾರ ಅದಕ್ಕೆ ಸೊಪ್ಪು ಹಾಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಮೃತ ಗಣಪತಿಯವರ ಪುತ್ರ ನೇಹಾಲ್ ಮಡಿಕೇರಿಯ ಪ್ರಧಾನ ಜೆಎಂಎಫ್‍ಸಿ ನ್ಯಾಯಾಲಯ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಗಣಪತಿ ಸಾವಿಗೂ ಮುನ್ನ ಆರೋಪಿಸಿದ್ದ ಸಚಿವ ಕೆ.ಜೆ. ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಮೊಹಾಂತಿ ಹಾಗೂ ಪ್ರಸಾದ್ ಇವರುಗಳ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಆದೇಶಿಸಿತ್ತು.

ಅದರಂತೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಬಳಿಕ ಈ ಎಫ್‍ಐಆರ್ ಅನ್ನು ರದ್ದು ಗೊಳಿಸುವಂತೆ ಕೋರಿ ಇಬ್ಬರು ಆರೋಪಿ ಅಧಿಕಾರಿಗಳು ಹೈಕೋರ್ಟ್