ಮಡಿಕೇರಿ, ನ. 29 : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಸಹಯೋಗದೊಂದಿಗೆ ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ 24ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2016 ದಲ್ಲಿ ಮಕ್ಕಳು ಮಂಡಿಸಿದ ವೈಜ್ಞಾನಿಕ ಯೋಜನಾ ಪ್ರಬಂಧ ಸ್ಪರ್ಧೆ ಗಮನ ಸೆಳೆಯಿತು.
ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆ ಎಂಬ ಕೇಂದ್ರ ವಿಷಯದಡಿ ವಿವಿಧ ವಿಷಯಗಳ ಕುರಿತು ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಐವರು ವಿದ್ಯಾರ್ಥಿಗಳನ್ನೊಳಗೊಂಡ ತಂಡವು ತಮ್ಮ ಶಾಲಾ ವ್ಯಾಪ್ತಿಯ ಪರಿಸರದಲ್ಲಿನ ಸಮಸ್ಯೆಗಳನ್ನು ಗುರುತಿಸಿ ಸ್ವತಃ ಸಮೀಕ್ಷೆ ಕೈಗೊಂಡು ಸಂಶೋಧಿಸಿ, ವಿಶ್ಲೇಷಿಸುವ ಮೂಲಕ ವೈಜ್ಞಾನಿಕ ಯೋಜನೆ ತಯಾರಿಸಿ ಹಿರಿಯ ವಿಜ್ಞಾನಿಗಳಂತೆ ಪ್ರಬಂಧ ಮಂಡಿಸಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
24 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆಗೆ ಸಂಬಂಧಿಸಿದಂತೆ ಶಕ್ತಿ, ಆರೋಗ್ಯ, ಸ್ವಚ್ಛತೆ ಮತ್ತು ಪೋಷಣೆ, ನವೀನ ಆಹಾರ ಮತ್ತು ವ್ಯವಸಾಯ, ಜೀವನಶೈಲಿ ಮತ್ತು ಜೀವನಾಧಾರ, ವಿಪತ್ತು ನಿರ್ವಹಣೆ, ನೀರಿನ ಸಂರಕ್ಷಣೆ, ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ಭೂಮಿಯ ಸಂಪನ್ಮೂಲಗಳು, ಪರಿಸರ ವ್ಯವಸ್ಥೆಗಳು, ಇತ್ಯಾದಿ ಕಾರ್ಯ ಮತ್ತು ಚಟುವಟಿಕೆಗಳು ಮುಂತಾದ ವಿಷಯಗಳ ಕುರಿತು ತಮ್ಮ ಪ್ರಯೋಗಗಳ ಮೂಲಕ ತಮ್ಮ ಶಾಲೆಯ ಸುತ್ತಮುತ್ತ ಕೈಗೊಂಡ ಸಮೀಕ್ಷೆಯನ್ನು ಕಿರಿಯ ವಿಜ್ಞಾನಿಗಳು ಅಂಕಿ ಅಂಶಗಳ ಸಮೇತ ಸಮಾವೇಶ ದಲ್ಲಿ ಅನಾವರಣ ಗೊಳಿಸಿದರು.
ಐವರನ್ನೊಳಗೊಂಡ ತಂಡದಲ್ಲಿ ರಚಿಸಿದ ಯೋಜನೆಗಳನ್ನು ಯಶಸ್ವಿಯಾಗಿ ಮಂಡಿಸಿ ತಮ್ಮ ಪ್ರತಿಭೆ ಮೆರೆದರು.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಭವಿಷ್ಯದ ವಿಜ್ಞಾನಿ ಗಳನ್ನಾಗಿ ರೂಪಿಸಲು ಸಹಕಾರಿ ಯಾಗಿದ್ದು, ಮಕ್ಕಳಲ್ಲಿ ವಿಜ್ಞಾನ ವಿಷಯದಲ್ಲಿ ಆಸಕ್ತಿ, ಕುತೂಹಲ, ಸಂಶೋಧನಾ ಪ್ರವೃತ್ತಿ ಬೆಳೆಸುವದರೊಂದಿಗೆ ಸೃಜನಶೀಲತೆ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಕೈಗೊಂಡ ಸಮೀಕ್ಷೆಯನ್ನು ಕಿರಿಯ ವಿಜ್ಞಾನಿಗಳು ಅಂಕಿ ಅಂಶಗಳ ಸಮೇತ ಸಮಾವೇಶದಲ್ಲಿ ಅನಾವರಣ ಗೊಳಿಸಿದರು. ಐವರನ್ನೊಳಗೊಂಡ ತಂಡದಲ್ಲಿ ರಚಿಸಿದ ಯೋಜನೆಗಳನ್ನು ಯಶಸ್ವಿಯಾಗಿ ಮಂಡಿಸಿ ತಮ್ಮ ಪ್ರತಿಭೆ ಮೆರೆದರು.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸಹಕಾರಿಯಾಗಿದ್ದು, ಮಕ್ಕಳಲ್ಲಿ ವಿಜ್ಞಾನ ವಿಷಯದಲ್ಲಿ ಆಸಕ್ತಿ, ಕುತೂಹಲ, ಸಂಶೋಧನಾ ಪ್ರವೃತ್ತಿ ಬೆಳೆಸುದರೊಂದಿಗೆ ಸೃಜನಶೀಲತೆ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಬೆಳೆಸಲು ಸೂಕ್ತ ವೇದಿಕೆ ಒದಗಿಸುತ್ತದೆ ಎಂದು ರಾಜ್ಯ ವಿಜ್ಞಾನ ಪರಿಷತ್ತಿನ ಕೇಂದ್ರ ಸಮಿತಿಯ ಸಹ ಕಾರ್ಯದರ್ಶಿ ಟಿ.ಜಿ.ಪ್ರೇಮಕುಮಾರ್ ತಿಳಿಸಿದರು.
ಜಿಲ್ಲಾಮಟ್ಟದಲ್ಲಿ ಉತ್ತಮವಾಗಿ ಪ್ರಬಂಧ ಮಂಡಿಸಿದ 10 ತಂಡಗಳು ಡಿ.3 ರಿಂದ ಮೂರು ದಿನಗಳ ಕಾಲ ಪುತ್ತೂರಿನಲ್ಲಿ ನಡೆಯಲಿರುವ 24 ನೇ ರಾಜ್ಯಮಟ್ಟದ ವಿಜ್ಞಾನ ಸಮಾವೇಶದಲ್ಲಿ ಪಾಲ್ಗೊಳ್ಳಲಿವೆ ಎಂದು ಸಮಾವೇಶದ ಜಿಲ್ಲಾ ಸಂಯೋಜಕ ಸಿ.ಎಸ್.ಸುರೇಶ್ ತಿಳಿಸಿದರು. ರಾಜ್ಯಮಟ್ಟದಲ್ಲಿ ಆಯ್ಕೆಯಾಗುವ ಮೊದಲ 30 ತಂಡಗಳು ಡಿ.27 ರಿಂದ 31 ರ ವರೆಗೆ ಮಹಾರಾಷ್ಟ್ರದ ಬಾರಾಮತಿ ನಗರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯಲಿವೆ.