ಮಡಿಕೇರಿ, ಜು. 22: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ಶ್ರೀ ಮುತ್ತಪ್ಪ ದೇವಾಲಯ ಸಮಿತಿ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ತಾ. 23 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ಶ್ರೀ ಮುತ್ತಪ್ಪ ದೇವಾಲಯದ ಅಧ್ಯಕ್ಷ ಟಿ.ಕೆ. ಸುಧೀರ್, ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ವಕೀಲರ ಸಂಘದ ಉಪಾದ್ಯಕ್ಷ ಕೆ.ಡಿ. ದಯಾನಂದ ಮತ್ತಿತರರು ಭಾಗವಹಿಸಲಿದ್ದಾರೆ.