ಮಡಿಕೇರಿ, ಜು. 20: ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಂಯಂತ್ರಣ ಮಂಡಳಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ನವೋದಯ ವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಹೊರವಲಯದ ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ಸಸಿ ನೆಡುವ ಮೂಲಕ ಒಂದು ವಾರಗಳ ಕಾಲ ನಡೆಯುವ ಗಿಡ ನೆಡುವ ಸಪ್ತಾಹಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮಾಸ್ಟರ್ ಆರ್.ಕೆ.ಜಿ. ಎಂ.ಎಂ ಮಹಾಸ್ವಾಮೀಜಿ ಚಾಲನೆ ನೀಡಿದರು.

ಈ ಸಂದರ್ಭ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಮೇಶ್ ಬಾಬು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಸಿ. ಶ್ರೀಕಾಂತ್, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕೊಂಡಲು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‍ನ ಉಪಾಧ್ಯಕ್ಷ ಬೇಬಿ ಮ್ಯಾಥ್ಯು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಮೈಸೂರು ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಕೆ.ಎಂ. ಲಿಂಗರಾಜು, ಜಿಲ್ಲಾ ಪರಿಸರಾಧಿಕಾರಿ ಜಿ.ಆರ್. ಗಣೇಶನ್, ಗಾಳಿಬೀಡು ನವೋದಯ ವಿದ್ಯಾಲಯದ ಉಪ ಪ್ರಾಂಶುಪಾಲೆ ವಿಜಯ ಮತ್ತಿತರರು ಶಾಲಾ ಮಕ್ಕಳ ಸಹಕಾರದೊಂದಿಗೆ ಗಿಡಗಳನ್ನು ನೆಟ್ಟರು.ಬಳಿಕ ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ನಡೆದ ಸಭಾ ಕಾರ್ಯಕ್ರಮ ನಡೆಯಿತು.