ಕೂಡಿಗೆ, ಆ. 20: ಕುಶಾಲನಗರ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಗುಮ್ಮನಕೊಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ಯನ್ನು ಕೂಡಿಗೆ ಜಿ.ಪಂ. ಸದಸ್ಯೆ ಕೆ.ಆರ್. ಮಂಜುಳಾ ನೆರವೇರಿಸಿ ವಿದ್ಯಾರ್ಥಿಗಳು ಕ್ರೀಡಾ ಮನೋ ಭಾವನೆಯಿಂದ ಕ್ರೀಡಾ ಚಟುವಟಿಕೆ ಗಳಲ್ಲಿ ಭಾಗವಹಿಸಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣಪತಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತಾಲೂಕು ಸದಸ್ಯೆ ಪುಷ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಣಿಪ್ರಸಾದ್, ಮುಳ್ಳುಸೋಗೆ ಗ್ರಾ.ಪಂ. ಉಪಾಧ್ಯಕ್ಷರಾದ ತಾರಾನಾಥ್, ಸದಸ್ಯರಾದ ಅರುಣ್‍ಚಂದ್ರ, ಗಣೇಶ್, ವಿಶ್ವನಾಥ್, ಜಯಲಕ್ಷ್ಮಿ, ಅಬ್ದುಲ್ ಖಾದರ್, ಸರಸ್ವತಿ, ಯುವಕ ಸಂಘದ ಅಧ್ಯಕ್ಷ ಮಣಿ, ಶಾಲಾ ಮುಖ್ಯೋಪಾ ಧ್ಯಾಯ ಲೋಕೇಶ್, ಸಹ ಶಿಕ್ಷಕರು ಹಾಗೂ ಗುಮ್ಮನಕೊಲ್ಲಿ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು. ವಲಯ ಮಟ್ಟದ ಕ್ರೀಡಾಕೂಟ ದಲ್ಲಿ 21 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಿಕ್ಷಕ ಬಸವರಾಜು ಸ್ವಾಗತಿಸಿ, ಲೋಕೇಶ್ ವಂದಿಸಿದರು.