ಸೋಮವಾರಪೇಟೆ, ಅ. 14: ಗೌಡಳ್ಳಿ ಗ್ರಾಮದ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಸಾಮೂಹಿಕ ಆಯುಧ ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ವಾಹನಗಳನ್ನು ದೇವಾಲಯಕ್ಕೆ ತಂದು ಸಾಮೂಹಿಕ ಪೂಜೆಯಲ್ಲಿ ಪಾಲ್ಗೊಂಡರು. ಶಕ್ತಿ ದೇವತೆಯ ಉತ್ಸವ ಮೂರ್ತಿಯ ಮೆರವಣಿಗೆ ಊರಿನ ಪ್ರಮುಖ ಬೀದಿಯಲ್ಲಿ ನಡೆಯಿತು. ಕಲಶ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಸಾಗಿದರು. ನಂತರ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ಆರ್. ಮುತ್ತಣ್ಣ, ಪ್ರಮುಖರಾದ ಹೆಚ್.ಎಸ್. ಕೊಮಾರಿಗೌಡ, ಜಿ.ಎ. ಮಹೇಶ್, ದಿನೇಶ್, ಟಿ.ಆರ್. ರಾಮಚಂದ್ರ, ಕೆ.ಎಂ. ಚಿನ್ನಪ್ಪ, ಜಿ.ಎಂ. ಹೂವಯ್ಯ, ಅರ್ಚಕ ವಿಶ್ವರೂಪ ಸೇರಿದಂತೆ ಇತರರು ಭಾಗವಹಿಸಿದ್ದರು.