ಸೋಮವಾರಪೇಟೆ, ಸೆ.18: ಸಮೀಪದ ತಣ್ಣೀರುಹಳ್ಳ ಗ್ರಾಮದ ಶ್ರೀ ಬಸವೇಶ್ವರ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಭವ್ಯ ಮೆರವಣಿಗೆಯ ಮೂಲಕ ಕೊಂಡೊಯ್ದು ಗ್ರಾಮದ ಹೊಳೆಯಲ್ಲಿ ವಿಸರ್ಜಿಸಲಾಯಿತು.
ಅಲಂಕೃತ ಮಂಟಪದಲ್ಲಿ ಉತ್ಸವ ಮೂರ್ತಿಗಳನ್ನು ಕುಳ್ಳಿರಿಸಿ ವಿದ್ಯುತ್ ದೀಪಗಳ ಅಲಂಕಾರದೊಂದಿಗೆ ಅಬ್ಬೂರುಕಟ್ಟೆಯವರೆಗೆ ಮೆರವಣಿಗೆ ನಡೆಸಿ ನಂತರ ವಿಸರ್ಜಿಸಲಾಯಿತು. ದೇವಾಲಯ ಸಮಿತಿ ಪದಾಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ವಿವಿಧ ಪೂಜಾ ಕಾರ್ಯಗಳಲ್ಲಿ ಭಾಗವಹಿಸಿದ್ದರು.