ಮಡಿಕೇರಿ, ಜ. 29: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಚಲನಚಿತ್ರ ಸಪ್ತಾಹ ಅಂಗವಾಗಿ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ಚಲನಚಿತ್ರ ಪ್ರದರ್ಶನ ಫೆ. 3 ರಿಂದ 9 ರವರೆಗೆ ನಗರದ ಕಾವೇರಿ ಮಹಲ್ ಚಿತ್ರಮಂದಿರದಲ್ಲಿ ನಡೆಯಲಿದೆ. ಈ ಪ್ರದರ್ಶನಕ್ಕೆ ಉಚಿತ ಪ್ರವೇಶವಿದ್ದು, ಸಾರ್ವಜನಿಕರು ಈ ಅವಕಾಶ ಪಡೆದುಕೊಳ್ಳುವಂತೆ ವಾರ್ತಾಧಿಕಾರಿ ಚಿನ್ನಸ್ವಾಮಿ ಕೋರಿದ್ದಾರೆ. ಫೆಬ್ರವರಿ 3 ರಂದು ಮೈತ್ರಿ, 4 ರಂದು ಶಿವಯೋಗಿ ಶ್ರೀ ಪುಟ್ಟಯ್ಯಜ್ಜ, 5 ರಂದು ತಿಥಿ, 6 ರಂದು ಕೃಷ್ಣ ಲೀಲಾ, 7 ರಂದು ರಂಗಿ ತರಂಗ, 8 ರಂದು ತಿಥಿ ಹಾಗೂ 9 ರಂದು ಮೈತ್ರಿ ಚಲನ ಚಿತ್ರಗಳು ಪ್ರದರ್ಶನಗೊಳ್ಳಲಿದೆ (ಆಯಾಯ ದಿನಗಳಂದು ಬೆಳಗ್ಗಿನ ಪ್ರದರ್ಶನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ) ಎಂದು ತಿಳಿಸಿದ್ದಾರೆ.
ನಗರದ ಕಾವೇರಿ ಮಹಲ್ ಚಿತ್ರ ಮಂದಿರದಲ್ಲಿ ಫೆ. 3 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಜಿ.ಪಂ. ಸಿಇಓ ಚಾರುಲತಾ ಸೋಮಲ್, ಚಲನಚಿತ್ರ ಮಂದಿರದ ವ್ಯವಸ್ಥಾಪಕ ಪಾಲಾಕ್ಷಪ್ಪ ಇತರರು ಭಾಗವಹಿಸಲಿದ್ದಾರೆ.